Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಲ್ಪೆ: ಎರಡು ದಿನಗಳ ಬಳಿಕ ಪತ್ತೆಯಾದ ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ!

Spread the love

ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನ ಮಂಜಿ ದಕ್ಕೆಯಲ್ಲಿ ಕಾಲು ಜಾರಿ ನೀರಿಗೆ ಬಿದ್ದಿದ್ದ ಮೀನುಗಾರನ ಮೃತದೇಹ ಎರಡು ದಿನಗಳ ಬಳಿಕ ಪತ್ತೆಯಾಗಿದೆ. ಮೃತರನ್ನು ಆಂಧ್ರಪ್ರದೇಶದ ಬೆೈನಾಪಲ್ಲಿ ನಿವಾಸಿ ಬೊನ್ನ (40) ಎಂದು ಗುರುತಿಸಲಾಗಿದೆ. ಅವರು ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮೀನುಗಾರಿಕೆ ಸಂಬಂಧಿತ ಕೆಲಸ ಮಾಡುತ್ತಿದ್ದರು.

ಜುಲೈ 17ರಂದು ಬೆಳಗ್ಗೆ ಮಂಜಿ ದಕ್ಕೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದ ಅವರು ನಾಪತ್ತೆಯಾಗಿದ್ದರು. ಬಳಿಕ ಸ್ಥಳೀಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದರು. ಜುಲೈ 19ರಂದು ಬೆಳಗ್ಗೆ ಅವರು ನೀರಿಗೆ ಬಿದ್ದಿದ್ದ ಸ್ಥಳದ ಸಮೀಪವೇ ಮೃತದೇಹ ತೇಲಿಬಂದಿದ್ದು, ಅದನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *