ಮುಜಫರ್‌ನಗರ ದುರಂತ: ಭಾರಿ ಮಳೆಗೆ ಕುಸಿದ ಮನೆ, ನಾಲ್ವರು ಮಕ್ಕಳ ಸಹಿತ ಐವರ ಸಾ*ವು

ಮುಜಫರ್‌ನಗರ: ಉತ್ತರ ಪ್ರದೇಶದ ಮುಜಫರ್‌ನಗರ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಮನೆ ಕುಸಿದು ನಾಲ್ವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಫುಗಾನಾ ಪೊಲೀಸ್ ಠಾಣೆ ವ್ಯಾಪ್ತಿಯ ಹಬೀಬ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಿರಂತರ ಮಳೆಯಿಂದಾಗಿ ಮನೆ ಕುಸಿದಿದೆ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಸತ್ಯೇಂದ್ರ ಕುಮಾರ್ ತಿಳಿಸಿದ್ದಾರೆ.
ಮೃತರನ್ನು ಜೀಶನ್ (2), ಅಹದ್ (5), ಅಲ್ಶಿಫಾ (7), ರುಖ್ಸರ್ (11) ಮತ್ತು ಇಸ್ಲಾಂ (75) ಎಂದು ಗುರುತಿಸಲಾಗಿದೆ ಎಂದು ಅವರು ಹೇಳಿದರು.ಘಟನೆಯಲ್ಲಿ ಕುಟುಂಬದ ಇತರ ಐದು ಸದಸ್ಯರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಮಾರ್ ಹೇಳಿದರು.ಅಧಿಕಾರಿಯ ಪ್ರಕಾರ, ಕುಟುಂಬವು ಮನೆಯೊಳಗೆ ಊಟ ಮಾಡುತ್ತಿದ್ದಾಗ, ಭಾರೀ ಮಳೆಯ ಪ್ರಭಾವದಿಂದ ಕಟ್ಟಡವು ಇದ್ದಕ್ಕಿದ್ದಂತೆ ಕುಸಿದು ಬಿದ್ದಿತು.ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.
