Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂತ್ರಾಲಯ ಯಾತ್ರೆ ವೇಳೆ ದುರಂತ: ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್ ಜಿಎಂ ರವಿಶೆಟ್ಟಿ ಸಾ*ವು!

Spread the love

ಮಂಗಳೂರು/ಕರ್ನೂಲು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಮಂಗಳೂರು ಮೂಲದ ಹಾಪ್‌ಕಾಮ್ಸ್ (HOPCOMS) ಪ್ರಧಾನ ವ್ಯವಸ್ಥಾಪಕ ರವಿಶೆಟ್ಟಿ ಅವರು ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಮಂತ್ರಾಲಯ ಸಮೀಪ ಮಂಗಳವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರವಿಶೆಟ್ಟಿ ಅವರು ತಮ್ಮ ಸ್ನೇಹಿತರೊಂದಿಗೆ ಕಾರಿನಲ್ಲಿ ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿಯ ಡಿವೈಡರ್/ಕಲ್ವರ್ಟ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಜಖಂಗೊಂಡಿದ್ದು, ರವಿಶೆಟ್ಟಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮಂಗಳೂರಿನ ನಿವಾಸಿಗಳಾದ ಪ್ರದೀಪ್ ಆಳ್ವ, ಪುರುಷೋತ್ತಮ ಭಂಡಾರಿ ಹಾಗೂ ಸಿಎ ಸುಧೇಶ್ ರೈ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ತಕ್ಷಣವೇ ಸಮೀಪದ ಎಮ್ಮಿಗನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ತುರ್ತು ಚಿಕಿತ್ಸೆ ನೀಡುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಕರ್ನೂಲು ಜಿಲ್ಲೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೆ ನಿದ್ರೆಗೆ ಜಾರಿದ್ದು ಕಾರಣವೇ ಅಥವಾ ತಾಂತ್ರಿಕ ದೋಷವೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ.


Spread the love
Share:

administrator

Leave a Reply

Your email address will not be published. Required fields are marked *