ದಕ್ಷಿಣ ಕನ್ನಡ: ಸಂಚಾರ ನಿಯಮ ಉಲ್ಲಂಘನೆ ತಡೆಗೆ ಪೊಲೀಸ್ ಕಟ್ಟುನಿಟ್ಟಿನ ಕ್ರಮ; ಪ್ರಮುಖ ಸ್ಥಳಗಳಲ್ಲಿ ಕಣ್ಗಾವಲು ಕ್ಯಾಮೆರಾ ಅಳವಡಿಕೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಯಿಂದ ಉಂಟಾಗುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ಪೊಲೀಸ್ ಇಲಾಖೆ ಮೊದಲ ಹಂತದಲ್ಲಿ ಪ್ರಮುಖ ಸ್ಥಳಗಳಲ್ಲಿ ಕಣ್ಗಾವಲು ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ವಿಟ್ಲ, ಉಪ್ಪಿನಂಗಡಿ, ಸುಳ್ಯ ಮತ್ತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳ ವ್ಯಾಪ್ತಿಯ ಪ್ರಮುಖ ಪ್ರದೇಶಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಈ ಕ್ಯಾಮೆರಾಗಳು ಜುಲೈ 23, ಗುರುವಾರ ಅಧಿಕೃತವಾಗಿ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.ಹೊಸದಾಗಿ ಅಳವಡಿಸಲಾದ ಈ ಕ್ಯಾಮೆರಾಗಳ ಮೂಲಕ, ಪೊಲೀಸರು ಸಂಚಾರ ನಿಯಮ ಉಲ್ಲಂಘನೆಯನ್ನು ಸೂಕ್ಷ್ಮವಾಗಿ ಗಮನಿಸಿ ಪತ್ತೆ ಮಾಡಲಿದ್ದಾರೆ. ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನಗಳ ನೋಂದಾಯಿತ ಮಾಲೀಕರಿಗೆ ನೇರವಾಗಿ ಅಧಿಕೃತ ನೋಟಿಸ್ ನೀಡಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.