Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಆಸ್ಪತ್ರೆ ಎಮರ್ಜೆನ್ಸಿ ವಾರ್ಡ್‌ಗೆ ಬೈಕ್ ನುಗ್ಗಿಸಿದ ಯುವಕರು

Spread the love

ಬೀದರ್: ಕರ್ನಾಟಕದ ಬೀದರ್ ಜಿಲ್ಲೆಯ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ (BRIMS) ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ (ಎಮರ್ಜೆನ್ಸಿ ವಾರ್ಡ್) ಮದ್ಯಪಾನ ಮಾಡಿದ್ದ ದ ಅಮಲಿನಲ್ಲಿದ್ದರೆನ್ನಲಾದ ಇಬ್ಬರು ಯುವಕರು ಬೈಕ್‌ನಲ್ಲೇ ನುಗ್ಗಿ ಆತಂಕದ ವಾತಾವರಣ ಸೃಷ್ಟಿಸಿದ ಘಟನೆ ನಡೆದಿದೆ.
ಮೂಲಗಳ ಪ್ರಕಾರ, ಮದ್ಯದ ಅಮಲಿನಲ್ಲಿದ್ದ ಇಬ್ಬರು ಯುವಕರು ಆಸ್ಪತ್ರೆ ಆವರಣ ಪ್ರವೇಶಿಸಿ, ನೇರವಾಗಿ ಬೈಕ್ ಅನ್ನು ತುರ್ತು ಚಿಕಿತ್ಸಾ ವಿಭಾಗದೊಳಗೆ ಚಲಾಯಿಸಿದ್ದಾರೆ.
ಈ ಆಕಸ್ಮಿಕ ಘಟನೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳು, ಅವರ ಸಂಬಂಧಿಕರು ಹಾಗೂ ಆಸ್ಪತ್ರೆ ಸಿಬ್ಬಂದಿ ಕೆಲಕಾಲ ಗಾಬರಿಗೊಂಡರು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.ಕೂಡಲೇ ಪೊಲೀಸರು ಇಬ್ಬರು ಯುವಕರನ್ನು ವಶಕ್ಕೆ ಪಡೆಯಲು ಮುಂದಾದ ವೇಳೆ ಅವರು ಪ್ರತಿರೋಧ ತೋರಿದ್ದಾರೆ ಎನ್ನಲಾಗಿದೆ. ಬಳಿಕ ಅವರನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದ್ದು, ಆಸ್ಪತ್ರೆಯ ಆಸ್ತಿಪಾಸ್ತಿಗೆ ಹಾನಿಯಾಗಿರುವ ಕುರಿತು ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಯುವಕರ ಕೃತ್ಯಕ್ಕೆ ಕಾರಣವೇನು? ನಿಜಕ್ಕೂ ಅವರು ಮದ್ಯದ ಅಮಲಿನಲ್ಲಿ ಈ ಕೃತ್ಯವೆಸಗಿದರೇ? ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *