ಮಂಗಳೂರು: ಹಂಪನಕಟ್ಟೆ ಸಮೀಪದ ಕಟ್ಟಡದಲ್ಲಿ ಸಂಭವಿಸಿದ ಭಾರಿ ಅಗ್ನಿ ದುರಂತ!

ಮಂಗಳೂರು: ಹಂಪನಕಟ್ಟೆಯಲ್ಲಿರುವ ಪಾದರಕ್ಷೆ ಅಂಗಡಿಯಲ್ಲಿ ಮಂಗಳವಾರ ಬೆಳಿಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಅಪಾರ ಹಾನಿಯಾಗಿದೆ.

ಬೆಂಕಿಯು ಪಕ್ಕದ ಎರಡು ಅಂಗಡಿಗಳಿಗೂ ಹರಡಿತು. ಯುರೋಪ್ ಶೂಸ್ ಎಂದು ಹೆಸರಿಸಲಾದ ಶೂ ಅಂಗಡಿಯು ಬೆಂಕಿಯಲ್ಲಿ ಸಂಪೂರ್ಣವಾಗಿ ನಾಶವಾಯಿತು.
ಸ್ಥಳಕ್ಕೆ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ದೌಡಾಯಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನದಲ್ಲಿ ತೊಡಗಿದರು.
ಪ್ರಾಥಮಿಕ ವರದಿಗಳ ಪ್ರಕಾರ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದು. ಘಟನೆಯಿಂದ ಅಪಾರ ಆಸ್ತಿಪಾಸ್ತಿ ನಷ್ಟವಾಗಿದೆ.