Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಾಸರಗೋಡು: H1N1 ವೈರಸ್ ಜ್ವರಕ್ಕೆ ಗೃಹಿಣಿ ಬಲಿ; ಕುಟುಂಬದ ಏಳು ಜನರಲ್ಲಿಯೂ ಜ್ವರದ ಲಕ್ಷಣ ಪತ್ತೆ, ಆರೋಗ್ಯ ಇಲಾಖೆಯಿಂದ ಹೈಅಲರ್ಟ್!

Spread the love

ಕಾಸರಗೋಡು: ಜಿಲ್ಲೆಯಲ್ಲಿ ಎಚ್1ಎನ್1 (H1N1) ವೈರಸ್ ಜ್ವರದ ಭೀತಿ ಎದುರಾಗಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದ ಗೃಹಿಣಿಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಅಜನೂರು ಮಾಣಿಕೊಟ್ಟೆಯ ಯಶೋಧಾ ಮೃತಪಟ್ಟವರು. ಕೆಲವು ದಿನಗಳ ಹಿಂದೆ ತೀವ್ರ ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಯಶೋಧಾ ಅವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಲ್ಲಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟು, ಎಚ್‌1ಎನ್1 ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಹೆಚ್ಚಿನ ವಿಶೇಷ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು.

ಸಂಪರ್ಕದಲ್ಲಿದ್ದವರ ನಿಗಾ
ಯಶೋಧಾ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬಸ್ಥರು ಸೇರಿದಂತೆ ಒಟ್ಟು ಏಳು ಜನರಲ್ಲಿ ಪ್ರಸ್ತುತ ಜ್ವರ ಮತ್ತು ಕೆಮ್ಮಿನ ಲಕ್ಷಣಗಳು ಪತ್ತೆಯಾಗಿವೆ. ವೈದ್ಯಕೀಯ ತಂಡವು ಅವರ ಗಂಟಲಿನ ದ್ರವದ ಮಾದರಿಗಳನ್ನು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದೆ.
ಘಟನೆಯ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಅಜನೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ನಿಗಾ ವಹಿಸಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಲು ಹಾಗೂ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.


Spread the love
Share:

administrator

Leave a Reply

Your email address will not be published. Required fields are marked *