Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನಾಮಕರಣ ಕಾರ್ಯಕ್ರಮ ತಡವಾಯಿತೆಂದು 11 ತಿಂಗಳ ಹಸುಗೂಸನ್ನು ನೆಲಕ್ಕೆ ಎಸೆದ ಕ್ರೂರಿ ತಂದೆ!

Spread the love

ಬೆಂಗಳೂರು: ನಾಮಕರಣ ಶಾಸ್ತ್ರಕ್ಕೆ ಪತ್ನಿ ಮತ್ತು ಆಕೆಯ ಕುಟುಂಬದವರು ತಡವಾಗಿ ಬಂದರು ಎಂಬ ಕ್ಷುಲ್ಲಕ ಕಾರಣಕ್ಕೆ ಕೋಪಗೊಂಡ ತಂದೆಯೊಬ್ಬ, ತನ್ನದೇ 11 ತಿಂಗಳ ಹೆಣ್ಣು ಮಗುವನ್ನು ನೆಲಕ್ಕೆ ಎಸೆದು ಕ್ರೌರ್ಯ ಮೆರೆದಿರುವ ಘಟನೆ ಬೆಂಗಳೂರಿನ ಬನಶಂಕರಿ ಸೆಕೆಂಡ್ ಸ್ಟೇಜ್‌ನಲ್ಲಿ ನಡೆದಿದೆ.

ಜುಲೈ 17ರಂದು ಬನಶಂಕರಿ ಸೆಕೆಂಡ್ ಸ್ಟೇಜ್‌ನ ಗೋಕುಲ್ ವೆಜ್ ಪಾರ್ಟಿ ಹಾಲ್‌ನಲ್ಲಿ ಮಗುವಿನ ನಾಮಕರಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬೆಳಗ್ಗೆ 10:30ಕ್ಕೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ಹೆಸರುಘಟ್ಟದಲ್ಲಿರುವ ತವರು ಮನೆಯಿಂದ ಪತ್ನಿ ರಮ್ಯಾ ಹಾಗೂ ಆಕೆಯ ಕುಟುಂಬ ಒಂದು ಗಂಟೆ ತಡವಾಗಿ ಬಂದಿದ್ದರಿಂದ ಪತಿ ವಿನಾಯಕ್ ಆಕ್ರೋಶಗೊಂಡಿದ್ದಾನೆ.

ಕಾರ್ಯಕ್ರಮಕ್ಕೆ ಬಂದಿದ್ದ ಅತಿಥಿಗಳ ಎದುರೇ ವಿನಾಯಕ್ ಗಲಾಟೆ ಮಾಡಿದ್ದಾನೆ. ಅತಿಥಿಗಳು ಬರುತ್ತಿದ್ದಾರೆ, ಬಟ್ಟೆ ಹಾಕಿಕೊಂಡು ಬಾ ಎಂದು ಹೇಳಿದ ಮಾವನ ಮೇಲೂ ಹಲ್ಲೆ ನಡೆಸಿದ್ದಾನೆ. ಅಲ್ಲದೆ, ಪತ್ನಿಯ ಜುಟ್ಟು ಹಿಡಿದು ಎಳೆದಾಡಿ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಗಲಾಟೆ ತೀವ್ರವಾಗುತ್ತಿದ್ದಂತೆ ತಡೆಯಲು ಬಂದ ಮಾವನ ಕಂಕುಳಲ್ಲಿದ್ದ 11 ತಿಂಗಳ ಮಗುವನ್ನು ಕಸಿದುಕೊಂಡು ನೆಲಕ್ಕೆ ಬಿಸಾಡಿದ್ದಾನೆ. ಮಗು ನೆಲಕ್ಕೆ ಬಿದ್ದ ರಭಸಕ್ಕೆ ತಲೆಗೆ ಗಂಭೀರ ಗಾಯವಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಚಿಕಿತ್ಸೆ ಪಡೆಯುತ್ತಿದೆ. ಘಟನೆಯ ವೇಳೆ ಗಲಾಟೆ ಬಿಡಿಸಲು ಬಂದ ಹೋಟೆಲ್ ಸಿಬ್ಬಂದಿಯ ಮೇಲೂ ವಿನಾಯಕ್ ಹಲ್ಲೆ ನಡೆಸಿ, ಕಚ್ಚಿ ಗಾಯಗೊಳಿಸಿದ್ದಾನೆ.

ಈ ಸಂಬಂಧ ಪತ್ನಿ ರಮ್ಯಾ ನೀಡಿದ ದೂರಿನ ಆಧಾರದಲ್ಲಿ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ (BNS) ಹಾಗೂ ಜುವೆನೈಲ್ ಜಸ್ಟಿಸ್ (JJ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ವಿನಾಯಕ್‌ನನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಘಟನೆ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.


Spread the love
Share:

administrator

Leave a Reply

Your email address will not be published. Required fields are marked *