Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೇರಳ: ಇಡುಕ್ಕಿಯಲ್ಲಿ ಭಾರಿ ಮಳೆಗೆ ಭೂಕುಸಿತ; ವ್ಯಕ್ತಿ ಸಾ*ವು, ಮತ್ತೊಬ್ಬರು ಮಣ್ಣಿನಡಿ ಸಿಲುಕಿರುವ ಶಂಕೆ!

Spread the love

ಇಡುಕ್ಕಿ: ಭಾರೀ ಮಳೆಗೆ ಕೇರಳಂ ರಾಜ್ಯದ ಇಡುಕ್ಕಿ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಮತ್ತೊಬ್ಬರು ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಇಡುಕ್ಕಿಯ ವಾಗಮೋನ್ ಎಂಬಲ್ಲಿ ಭೂಕುಸಿತ ಸಂಭವಿಸಿ ವೈಕೋಮ್ ಮೂಲದ ಪ್ರಭಾಕರನ್ ನಾಯರ್ ಎಂಬವರು ಮೃತಪಟ್ಟಿದ್ದಾರೆ. ಅವಶೇಷಗಳಡಿಯಿಂದ ಅವರ ಮೃತದೇಹವನ್ನು ಹೊರೆತೆಗೆಯುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತ್ಯೇಕ ಘಟನೆಯಲ್ಲಿ ಅಡೂರ್ಮಲಾದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದೆ. ಸ್ಥಳದಲ್ಲಿ ಮಣ್ಣು ಮತ್ತು ಅವಶೇಷಗಳಡಿಯಲ್ಲಿ ಒಬ್ಬ ವ್ಯಕ್ತಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ರಾಜ್ಯದಲ್ಲಿ ಭಾರೀ ಮಳೆಯಿಂದ ಹಲವೆಡೆ ಹಾನಿಯಾಗಿದೆ. ಕೊಚ್ಚಿ-ಧನುಷೋಡಿ ರಾಷ್ಟ್ರೀಯ ಹೆದ್ದಾರಿಯ ಆದಿಮಲಿಯ ಮಾಚಿಪ್ಲಾವು ಸಮೀಪ ಭೂಕುಸಿತ ಸಂಭವಿಸಿದೆ. ಭೂಕುಸಿತದ ವೇಳೆ ಕಾರು ಹಾಗೂ ಲಾರಿ ಮಣ್ಣಿನಡಿ ಸಿಲುಕಿರುವ ಬಗ್ಗೆ ವರದಿಯಾಗಿದೆ. ಈ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.


Spread the love
Share:

administrator

Leave a Reply

Your email address will not be published. Required fields are marked *