Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬ್ಯಾಂಕಾಕ್ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ: ಶಿಕ್ಷಕ ಸಾ*ವು, 15 ಮಂದಿಗೆ ಗಾಯ!

Spread the love

ಬ್ಯಾಂಕಾಕ್: ಥೈಲ್ಯಾಂಡ್‌ನ ರಾಜಧಾನಿ ಬ್ಯಾಂಕಾಕ್ ಬಳಿಯ ಪ್ರಸಿದ್ಧ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಸಹಪಾಠಿಗಳು ಹಾಗೂ ಶಿಕ್ಷಕರ ಮೇಲೆ ದಿಢೀರ್ ಗುಂಡಿನ ದಾಳಿ ನಡೆಸಿದ್ದಾನೆ.

ಈ ದಾರುಣ ಘಟನೆಯಲ್ಲಿ ಓರ್ವ ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದು, ಕನಿಷ್ಠ 15 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ದಾಳಿ ನಡೆಸಿದ ವಿದ್ಯಾರ್ಥಿಯು ಕೃತ್ಯದ ಬೆನ್ನಲ್ಲೇ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯ ಪೊಲೀಸರು ದೃಢಪಡಿಸಿದ್ದಾರೆ.ಬ್ಯಾಂಕಾಕ್ ಸಮೀಪದ ನೊಂಥಬುರಿಯ ಬ್ಯಾಂಗ್ ಕ್ರುವಾಯಿ ಜಿಲ್ಲೆಯಲ್ಲಿರುವ ದೇಬ್ಸಿರಿನ್ ನೊಂಥಬುರಿ ಶಾಲೆಯಲ್ಲಿ ಶುಕ್ರವಾರ ಬೆಳಗ್ಗೆ ತರಗತಿಗಳು ಆರಂಭವಾಗುವ ವೇಳೆಗೆ ಈ ಭೀಕರ ಘಟನೆ ನಡೆದಿದೆ. 9ನೇ ತರಗತಿಯ ವಿದ್ಯಾರ್ಥಿ ಬಂದೂಕಿನೊಂದಿಗೆ ಶಾಲೆಗೆ ಆಗಮಿಸಿ ದಿಢೀರನೆ ಗುಂಡಿನ ಸುರಿಮಳೆ ಗೈದಿದ್ದಾನೆ. ಗುಂಡೇಟಿನಿಂದ ಶಿಕ್ಷಕರೊಬ್ಬರು ಕೊನೆಯುಸಿರೆಳೆದಿದ್ದು, ಗಾಯಗೊಂಡ 15 ಜನರಲ್ಲಿ ಮೂವರು ವಿದ್ಯಾರ್ಥಿಗಳ ಪರಿಸ್ಥಿತಿ ಗಂಭೀರವಾಗಿದೆ.ಘಟನೆಯ ಬಳಿಕ ಭದ್ರತಾ ಪಡೆಗಳು ಶಾಲೆಯನ್ನು ಸುತ್ತುವರೆಯುತ್ತಿದ್ದಂತೆ, ದಾಳಿಕೋರ ವಿದ್ಯಾರ್ಥಿಯು ಶಾಲಾ ಆವರಣದಲ್ಲೇ ತನ್ನ ಮೇಲೆ ಗುಂಡು ಹಾರಿಸಿಕೊಂಡು ಶವವಾಗಿದ್ದಾನೆ. ಪ್ಲೈ ಬ್ಯಾಂಗ್ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ರಕ್ಷಣಾ ಸಿಬ್ಬಂದಿ ತಕ್ಷಣವೇ ಶಾಲಾ ಕ್ಯಾಂಪಸ್‌ಗೆ ಧಾವಿಸಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.ಶಾಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಸಾರ್ವಜನಿಕರು ಹಾಗೂ ಮಾಧ್ಯಮಗಳು ಘಟನೆಯ ದೃಶ್ಯಗಳನ್ನು ಸೋಷಿಯಲ್ ಮೀಡಿಯಾದಲ್ಲಿ ನೇರ ಪ್ರಸಾರ ಮಾಡದಂತೆ ಪೊಲೀಸರು ಮನವಿ ಮಾಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *