Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಭಾರತ-ಶ್ರೀಲಂಕಾ ಟೆಸ್ಟ್ ಸರಣಿ: ಗಾಯದ ಸಮಸ್ಯೆಯಿಂದ ಹೊರಬಿದ್ದ ಯುವ ಬ್ಯಾಟರ್ ಸಾಯಿ ಸುದರ್ಶನ್!

Spread the love

ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಗಸ್ಟ್ 15 ರಿಂದ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಅಭ್ಯಾಸ ಪಂದ್ಯವನ್ನು ಆಡುತ್ತಿರುವ ಟೀಂ ಇಂಡಿಯಾಕ್ಕೆ ಆಘಾತ ಎದುರಾಗಿದೆ. ತಂಡದ ಯುವ ಬ್ಯಾಟರ್ ಸಾಯಿ ಸುದರ್ಶನ್ ಇಡೀ ಸರಣಿಯಿಂದ ಹೊರಬಿದ್ದಿದ್ದಾರೆ. ಗಾಯದಿಂದ ಬಳಲುತ್ತಿದ್ದ ಸುದರ್ಶನ್ ಚೇತರಿಸಿಕೊಳ್ಳದ ಕಾರಣ ಅವರನ್ನು ಸರಣಿಯಿಂದ ಹೊರಗಿಡಲಾಗಿದೆ

ಶ್ರೀಲಂಕಾ ಪ್ರವಾಸಕ್ಕೆ ತಂಡವನ್ನು ಪ್ರಕಟಿಸುವ ಸಮಯದಲ್ಲಿ ಸಾಯಿ ಸುದರ್ಶನ್ ಅವರನ್ನು ಸಹ ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಆದರೆ ಸಾಯಿ ಸುದರ್ಶನ್ ತಂಡದಲ್ಲಿ ಆಡುವುದು ಅವರ ಫಿಟ್ನೆಸ್ ಅನ್ನು ಅವಲಂಬಿಸಿರುತ್ತದೆ ಎಂದು ಬಿಸಿಸಿಐ ಅಂದೇ ಹೇಳಿತ್ತು. ಆದರೀಗ ಸರಿಯಾದ ಸಮಯಕ್ಕೆ ಸುದರ್ಶನ್ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರಿಗೆ ಚೇತರಿಕೆಗೆ ಮತ್ತಷ್ಟು ಸಮಯಾವಕಾಶ ನೀಡಲಾಗಿದೆ

ವಾಸ್ತವವಾಗಿ ಕಳೆದೆರಡು ದಿನಗಳ ಹಿಂದೆ ಸಾಯಿ ಸುದರ್ಶನ್ ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿದ್ದು ಎನ್​ಸಿಎ ವೈದ್ಯಕೀಯ ತಂಡದಲ್ಲಿ ಕ್ಲೀಯರೆನ್ಸ್ ಸರ್ಟಿಫಿಕೆಟ್ ಕೂಡ ಪಡೆದಿದ್ದಾರೆ ಎಂದು ವರದಿಯಾಗಿತ್ತು. ಅಲ್ಲದೆ ಸುದರ್ಶನ್ ಆಗಸ್ಟ್ 9ರೊಳಗೆ ಶ್ರೀಲಂಕಾದಲ್ಲಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂತಲೂ ಹೇಳಲಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ

ಸಾಯಿ ಸುದರ್ಶನ್ ಈ ಸರಣಿಯಿಂದ ಹೊರಗುಳಿದಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಏಕೆಂದರೆ ಸುದರ್ಶನ್ ಮೂರನೇ ಕ್ರಮಾಂಕದಲ್ಲಿ ತಂಡದ ಬ್ಯಾಟಿಂಗ್‌ ಬಲವನ್ನು ಹೆಚ್ಚಿಸುತ್ತಿದ್ದರು. ಅಲ್ಲದೆ ಇತ್ತೀಚೆಗೆ ಭಾರತ ಎ ತಂಡದೊಂದಿಗೆ ಶ್ರೀಲಂಕಾ ಪ್ರವಾಸ ಮಾಡಿದ್ದ ಸಾಯಿ ಸುದರ್ಶನ್ ಆಡಿದ್ದ ನಾಲ್ಕು ಇನ್ನಿಂಗ್ಸ್‌ಗಳಲ್ಲಿ 166.00 ಸರಾಸರಿಯಲ್ಲಿ ಎರಡು ಶತಕಗಳ ಸಹಿತ 332 ರನ್ ಗಳಿಸಿದ್ದರು

ಹೀಗಾಗಿ ಅದ್ಭುತ ಫಾರ್ಮ್​ನಲ್ಲಿದ್ದ ಸುದರ್ಶನ್ ಸರಣಿಯಿಂದ ಹೊರಗುಳಿದಿರುವುದು ತಂಡವನ್ನು ಸಂಕಷ್ಟಕ್ಕೆ ತಳ್ಳಿದೆ. ಸಾಯಿ ಸುದರ್ಶನ್​ಗೂ ಮೊದಲು, ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕೂಡ ಗಾಯದ ಕಾರಣದಿಂದಾಗಿ ಸರಣಿಯಿಂದ ಹೊರಗಿದ್ದಾರೆ. ಹಾಗೆಯೇ ನಾಯಕ ಶುಭ್​ಮನ್ ಗಿಲ್ ಕೂಡ ಗಾಯಗೊಂಡಿರುವುದು ತಂಡಕ್ಕೆ ಕಳವಳಕಾರಿಯಾಗಿದೆ. ಆದಾಗ್ಯೂ ಗಿಲ್ ಮೊದಲ ಟೆಸ್ಟ್ ವೇಳೇಗೆ ಚೇತರಿಸಿಕೊಳ್ಳುವ ಸಾಧ್ಯತೆಗಳಿವೆ


Spread the love
Share:

administrator

Leave a Reply

Your email address will not be published. Required fields are marked *