Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಗಳೂರು: ಪೆರ್ಮುದೆಯಲ್ಲಿ ಮನೆಯ ಅಂಗಳಕ್ಕೆ ನುಗ್ಗಿ ನಾಯಿಯನ್ನು ಹೊತ್ತೊಯ್ದ ಚಿರತೆ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

Spread the love

ಮಂಗಳೂರು: ಮನೆಯ ಅಂಗಳಕ್ಕೆ ನುಗ್ಗಿದ ಚಿರತೆಯೊಂದು ಅಲ್ಲೇ ಮಲಗಿದ್ದ ಶ್ವಾನವನ್ನು ಹೊತ್ತೊಯ್ದ ಘಟನೆ ಮಂಗಳೂರು ಹೊರವಲಯದ ಬಜ್ಪೆ ಸಮೀಪದ ಪೆರ್ಮುದೆಯಲ್ಲಿ ನಡೆದಿದೆ.

ಪೆರ್ಮುದೆಯ ದಿವಂಗತ ಜಿ.ಕೆ. ನೋಣಯ್ಯ ಪೂಜಾರಿ ಅವರ ಮನೆಯ ಅಂಗಳಕ್ಕೆ ಚಿರತೆ ಏಕಾಏಕಿ ನುಗ್ಗಿದೆ. ಮನೆಯ ಸಮೀಪ ಮಲಗಿದ್ದ ಶ್ವಾನದ ಮೇಲೆ ದಾಳಿ ನಡೆಸಿದ ಚಿರತೆ, ಅದನ್ನು ಬಾಯಿಯಲ್ಲಿ ಹಿಡಿದುಕೊಂಡು ಅಲ್ಲಿಂದ ತೆರಳಿದೆ. ಚಿರತೆ ಶ್ವಾನವನ್ನು ಹೊತ್ತೊಯ್ಯುತ್ತಿರುವ ಸಂಪೂರ್ಣ ದೃಶ್ಯ ಮನೆಯ ಆವರಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಾತ್ರಿ ವೇಳೆ ನಡೆದ ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.ಮನೆಯ ಅಂಗಳದವರೆಗೂ ಚಿರತೆ ಬಂದಿರುವುದು ಜನರಲ್ಲಿ ಭಯಕ್ಕೆ ಕಾರಣವಾಗಿದ್ದು, ಪರಿಸರದಲ್ಲಿ ಮತ್ತಷ್ಟು ಚಿರತೆಗಳ ಸಂಚಾರವಿದೆಯೇ ಎಂಬ ಬಗ್ಗೆಯೂ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಚಿರತೆಗಳ ಓಡಾಟ ಹೆಚ್ಚಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು, ಜನರ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *