Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಣಿಪಾಲ: ಸ್ನೇಹಿತರೊಂದಿಗೆ ಊಟ ಮುಗಿಸಿ ವಾಪಸಾಗುತ್ತಿದ್ದ ವೇಳೆ ಬುಲೆಟ್ ಬೈಕ್ ಮರಕ್ಕೆ ಢಿಕ್ಕಿ; ಯುವಕ ಸಾ*ವು!

Spread the love

ಮಣಿಪಾಲ: ಸ್ನೇಹಿತರೊಂದಿಗೆ ರಾತ್ರಿ ಊಟ ಮುಗಿಸಿ ವಾಪಸಾಗುತ್ತಿದ್ದ ವೇಳೆ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದು ಯುವಕನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಹೆರ್ಗ ಗ್ರಾಮದ ಕೆಳಪರ್ಕಳ ಇಳಿಜಾರಿನಲ್ಲಿರುವ ಗೋಪಾಲಕೃಷ್ಣ ದೇವಸ್ಥಾನದ ಬಳಿ ಮಂಗಳವಾರ ನಸುಕಿನ ವೇಳೆ ಸಂಭವಿಸಿದೆ.

ಆತ್ರಾಡಿ ನಿವಾಸಿ ಸನತ್ (21) ಮೃತಪಟ್ಟ ದುರ್ದೈವಿ. ಸನತ್ ಅವರು ಸ್ನೇಹಿತರೊಂದಿಗೆ ಮಣಿಪಾಲದಲ್ಲಿ ರಾತ್ರಿ ಊಟ ಮುಗಿಸಿಕೊಂಡು, ಗೆಳೆಯ ಆಶಿಶ್ ಎಂಬುವರ ಬುಲೆಟ್ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಮಂಗಳವಾರ ನಸುಕಿನ ವೇಳೆ ಸುಮಾರು 1:25 ರ ಸುಮಾರಿಗೆ ಮಣಿಪಾಲ ಕಡೆಯಿಂದ ಪರ್ಕಳ ಕಡೆಗೆ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ, ಕೆಳಪರ್ಕಳದ ಇಳಿಜಾರಿನಲ್ಲಿ ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದಾಗಿ ಬೈಕ್ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಯ ಮರಕ್ಕೆ ಬೈಕ್ ಬಲವಾಗಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಸನತ್ ಅವರು ಬೈಕ್ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಲ್ಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *