Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು: ಕಂಠೀರವ ಸ್ಟೂಡಿಯೋ ಬಳಿ ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾ*ವು!

Spread the love

ಬೆಂಗಳೂರು: ಬೆಂಗಳೂರಿನ ಕಂಠೀರವ ಸ್ಟೂಡಿಯೋ ಬಳಿ ಅಂಡರ್ ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ನಡೆದಿದೆ.

ಅಂಡರ್‌ಪಾಸ್ ಕಾಮಗಾರಿಗಾಗಿ ರಸ್ತೆಯಲ್ಲಿ ಸುಮಾರು 20 ಅಡಿ ಆಳದವರೆಗೆ ಮಣ್ಣನ್ನು ಅಗೆಯಲಾಗಿತ್ತು. ಇಂದು ಎಂದಿನಂತೆ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದಾಗ ಮೇಲಿಂದ ಏಕಾಏಕಿ ಮಣ್ಣಿನ ತಡೆಗೋಡೆ ಕುಸಿದುಬಿದ್ದಿದೆ. ಈ ವೇಳೆ ಸ್ಥಳದಲ್ಲಿದ್ದ ಐವರು ಕಾರ್ಮಿಕರು ಮಣ್ಣಿನ ಅಡಿಯಲ್ಲಿ ಸಿಲುಕಿ ಉಸಿರಾಡಲಾಗದೆ ನರಳಾಡಿದ್ದಾರೆ. ಸಿಬ್ಬಂದಿ ಹಾಗೂ ಸಾರ್ವಜನಿಕರ ಸಮಯಪ್ರಜ್ಞೆಯಿಂದ ಮಣ್ಣಿನಡಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ದುರದೃಷ್ಟವಶಾತ್ ಇನ್ನಿಬ್ಬರು ಕಾರ್ಮಿಕ ಮಣ್ಣಿನ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ.

ರಸ್ತೆಯಲ್ಲಿ ಅಂಡರ್ ಪಾಸ್ ಕಾಮಗಾರಿಗಾಗಿ 20 ಅಡಿಯಷ್ಟು ಮಣ್ಣು ತೋಡಲಾಗಿತ್ತು. ಆದ್ರೆ, ಕೆಲಸ ಮಾಡುವಾಗ ಏಕಾಏಕಿ ಮಣ್ಣು ಕುಸಿದಿದೆ. ಈ ವೇಳೆ ಅವರನ್ನು ರಕ್ಷಿಸಲು ಕಾರ್ಯಾಚರಣೆ ಮಾಡುವ ಸಂದರ್ಭದಲ್ಲೇ ಒಬ್ಬ ಕಾರ್ಮಿಕ ಅಸುನೀಗಿದ್ದ, ಇನ್ನೊಬ್ಬ ಕಾರ್ಮಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸ್ಥಳೀಯರ ನೆರವಿನಿಂದ ಕಾರ್ಮಿಕನ ರಕ್ಷಣೆ ಕಾರ್ಯಾಚರಣೆ ನಡೆಸಲಾಗಿತ್ತು. ಕೆಲವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಹೆಚ್ಚುವರಿ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಮಣ್ಣಿನಡಿಯಲ್ಲಿ ಇನ್ನು ಯಾರಾದರೂ ಸಿಲುಕಿದ್ದಾರೆಯೇ ಎಂಬ ಶಂಕೆಯ ಮೇಲೆ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಎಫ್​​ಟಿಐ ಸರ್ಕಲ್ ಬಳಿ ಬಿಡಿಎ ವತಿಯಿಂದ ಕಾಮಗಾರಿ ನಡೆಯುತ್ತಿತ್ತು. ಆರ್​ಸಿಸಿ ಹಾಕಲು ಗುಂಡಿಯಲ್ಲಿ ತುಂಬಿದ್ದ ನೀರು ಖಾಲಿ ಮಾಡುತ್ತಿದ್ದಾಗ ಈ ಮಣ್ಣು ಕುಸಿದಿದೆ. ಈ ವೇಳೆ ಸ್ಥಳದಲ್ಲಿ ಐವರು ಕಾರ್ಮಿಕರು ಇದ್ದರು ಎಂದು ತಿಳಿದು ಬಂದಿದೆ. ಈ ಪೈಕಿ ಮಣ್ಣು ಕುಸಿಯುತ್ತಿದ್ದಂತೆ ಮೂವರು ಓಡಿ ಹೋಗಿದ್ದರು. ಮಣ್ಣಿನಲ್ಲಿ ಸಿಲುಕಿಕೊಂಡಿದ್ದ ಪರಿಮಳ್ (31) ಸ್ಥಳದಲ್ಲೇ ಮೃತಪಟ್ಟರೆ, ಸೋನಾರಾಮ್ (26) ಎಂಬಾತನನ್ನ ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿತ್ತು. ಕಣ್ವ ಆಸ್ಪತ್ರೆಯಲ್ಲಿ ಸೋನಾರಾಮ್ ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಸದಾನಂದ್, ಸುನೀಲ್, ಇಮ್ತಿಯಾಯಾಜ್ ಗಾಯಗೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *