Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

“ವೈದ್ಯಕೀಯ ವಿದ್ಯಾರ್ಥಿನಿಯ ದೂರು ಆಧರಿಸಿ ಕಲ್ಕತ್ತಾ ಹೈಕೋರ್ಟ್ ನಿರ್ದೇಶನದಂತೆ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ವಶಕ್ಕೆ!”

Spread the love

ಕೋಲ್ಕತ್ತ : ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕಿರುಕುಳ, ಹಲ್ಲೆ ಹಾಗೂ ಕ್ರಿಮಿನಲ್ ಬೆದರಿಕೆ ಹಾಕಿದ ಆರೋಪದ ಮೇಲೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟಿಗ ಹಾಗೂ ಪಶ್ಚಿಮಬಂಗಾಳ ರಣಜಿ ಆಟಗಾರ ಅಭಿಷೇಕ್ ಪೊರೆಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ನೀಡಿದ ಗಂಭೀರ ದೂರಿನನ್ವಯ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಅಭಿಷೇಕ್ ಪೊರೆಲ್ ಹಾಗೂ ಸಂತ್ರಸ್ತೆ ಪ್ರೀತಿಯಲ್ಲಿದ್ದರು. ಆದರೆ ಕಳೆದ ವರ್ಷ ಇಬ್ಬರ ನಡುವೆ ಭಿನ್ನಾಭಿಪ್ರಾಯಗಳು ಕಾಣಿಸಿಕೊಂಡು ಪೊರೆಲ್ ಸಂತ್ರಸ್ತೆಯಿಂದ ದೂರವಾಗಲು ಪ್ರಾರಂಭಿಸಿದ್ದರು. ಜೂನ್ ಆರಂಭದಲ್ಲಿ ಸಂತ್ರಸ್ತೆ ಹೂಗ್ಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಮದುವೆಯ ಸುಳ್ಳು ಭರವಸೆ ನೀಡಿ ಲೈಂಗಿಕ ಸಂಬಂಧ ಬೆಳೆಸಿದ್ದು, ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್ ಕ್ರಿಕೆಟಿಗನನ್ನು ಬಂಧಿಸುವಂತೆ ಪೊಲೀಸರಿಗೆ ಸ್ಪಷ್ಟ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ಹೂಗ್ಲಿ ಗ್ರಾಮೀಣ ಪೊಲೀಸ್ ಎಸ್ಪಿ ಕುನ್ವರ್ ಭೂಷಣ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ಪೊಲೀಸರು ಬಂಧನ ಪ್ರಕ್ರಿಯೆ ನಡೆಸಿದ್ದಾರೆ.
“ಅಭಿಷೇಕ್ ಪೊರೆಲ್ ದೂರುದಾರರನ್ನು ಕಾನೂನುಬಾಹಿರವಾಗಿ ಬಂಧಿಸಿಟ್ಟು, ಆಹಾರ ನೀಡದೆ ಪ್ರತ್ಯೇಕವಾಗಿಟ್ಟಿದ್ದರು. ಇದರಿಂದ ದೂರುದಾರರು ದೈಹಿಕವಾಗಿ ತೀವ್ರ ದುರ್ಬಲಗೊಂಡು ಸರಿಯಾಗಿ ನಡೆಯಲಾಗದ ಸ್ಥಿತಿಯಲ್ಲಿದ್ದರು” ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

2023 ರಿಂದ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ವಿಕೆಟ್ ಕೀಪರ್-ಬ್ಯಾಟರ್ ಆಗಿ ಆಡುತ್ತಿರುವ 24 ವರ್ಷದ ಅಭಿಷೇಕ್ ಪೊರೆಲ್, ಭಾರತ ಎ ತಂಡವನ್ನು ಪ್ರತಿನಿಧಿಸಿದ್ದರು. ಈ ಹಿಂದೆ ತಮ್ಮ ಮೇಲಿನ ಎಲ್ಲ ಆರೋಪಗಳನ್ನು ಅವರು ನಿರಾಕರಿಸಿದ್ದರು. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *