Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸುಳ್ಯ: ಹಳೇಗೇಟು ಬಳಿ ಅರಣ್ಯ ಇಲಾಖೆಯ ಬೊಲೆರೋ ಹಾಗೂ ಮಹೀಂದ್ರ ಜೀತೋ ವಾಹನಗಳ ನಡುವೆ ಅಪಘಾತ!

Spread the love

ಸುಳ್ಯ: ನಗರದ ಹಳೇಗೇಟು ಬಳಿ ಅರಣ್ಯ ಇಲಾಖೆಗೆ ಸೇರಿದ ಬೊಲೆರೋ ಹಾಗೂ ಮಹೀಂದ್ರ ಜೀತೋ ವಾಹನದ ನಡುವೆ ರಸ್ತೆ ಅಪಘಾತ ಸಂಭವಿಸಿದೆ.

ಅರಣ್ಯ ಇಲಾಖೆಯ ಬೊಲೆರೋ ವಾಹನವು ಸುಳ್ಯದಿಂದ ಪೈಚಾರ್ ಕಡೆಗೆ ತೆರಳುತ್ತಿತ್ತು. ಅದೇ ವೇಳೆ, ಮಹೀಂದ್ರ ಜೀತೋ ವಾಹನವು ಮಡಿಕೇರಿ ಕಡೆಗೆ ಸಂಚರಿಸುತ್ತಿತ್ತು. ಈ ಮಾರ್ಗಮಧ್ಯೆ ಹಳೇಗೇಟ್ ಬಳಿ ಎರಡು ವಾಹನಗಳ ನಡುವೆ ಈ ಅಪಘಾತ ಸಂಭವಿಸಿದೆ.ಘಟನೆ ನಡೆದ ತಕ್ಷಣವೇ ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ ವಾಹನಗಳಿಗೆ ಹಾನಿಯಾಗಿದ್ದು, ಸುಗಮ ಸಂಚಾರಕ್ಕೆ ಪೊಲೀಸರು ಅನುವು ಮಾಡಿಕೊಟ್ಟಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.


Spread the love
Share:

administrator

Leave a Reply

Your email address will not be published. Required fields are marked *