Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಾಸರಗೋಡು: ಚೆಮ್ನಾಡ್‌ನಲ್ಲಿ ಕೌಟುಂಬಿಕ ಸಮಸ್ಯೆಗೆ ನೊಂದು ಒಂದೇ ಕೊಕ್ಕೆಗೆ ತಂದೆ ಹಾಗೂ ಮಗಳು ನೇಣಿಗೆ ಶರಣು!

Spread the love

ಕಾಸರಗೋಡು : ತಂದೆ ಹಾಗೂ ಮಗಳು ಕೋಣೆಯಲ್ಲಿ ಒಂದೇ ಕೊಕ್ಕೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಚೆಮ್ನಾಡ್ ಕೋಳಿಯಡ್ಕ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ. ಮೀಪುಗಿರಿ ಮೂಲದ ಗಣೇಶನ್ ಹಾಗೂ ಅವರ ಮಗಳು ವೈಷ್ಣವಿ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು.ಕೌಟುಂಬಿಕ ಸಮಸ್ಯೆಗಳೇ ಈ ಆತ್ಮಹತ್ಯೆಗೆ ಪ್ರಮುಖ ಕಾರಣವೆಂದು ಶಂಕಿಸಲಾಗಿದೆ. ಮೂಲಗಳ ಪ್ರಕಾರ, ನಿನ್ನೆ ರಾತ್ರಿ ಮಗಳು ವೈಷ್ಣವಿ ಮಲಗುವ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಇದನ್ನು ಗಮನಿಸಿದ ತಂದೆ ಗಣೇಶನ್ ತಕ್ಷಣವೇ ಸ್ಥಳೀಯರಿಗೆ ಮಾಹಿತಿ ನೀಡಿದ್ದರು. ಆದರೆ, ವಿಷಯ ತಿಳಿದು ನೆರೆಹೊರೆಯವರು ಮನೆಗೆ ಧಾವಿಸುವಷ್ಟರಲ್ಲಿ ತಂದೆ ಗಣೇಶನ್ ಕೂಡ ಮಗಳು ನೇಣು ಬಿಗಿದುಕೊಂಡಿದ್ದ ಅದೇ ಕೊಕ್ಕೆಗೆ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮೇಲ್ಪರಂಬ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ವಶಕ್ಕೆ ಪಡೆದು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆಗೆ ನಿಖರ ಕಾರಣವೇನು ಹಾಗೂ ಕೌಟುಂಬಿಕ ಸಮಸ್ಯೆಯ ಹಿನ್ನೆಲೆಯೇನು ಎಂಬುದರ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *