Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸುಗಮ ಟ್ರಾವೆಲ್ಸ್ ಖಾಸಗಿ ಬಸ್ ಭೀಕರ ಅಪಘಾ*ತ

Spread the love

ಬೆಂಗಳೂರು-ಮೈಸೂರು ಹೆದ್ದಾರಿಯ ಲಾಂಕೋ ಟೋಲ್ ಗೇಟ್ ಬಳಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐಷಾರಾಮಿ ಖಾಸಗಿ ಬಸ್ ಭೀಕರ ಅಪಘಾತಕ್ಕೀಡಾಗಿದ್ದು, ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ ಮತ್ತು 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬೆಲ್ಲೂರಿನ ಏಮ್ಸ್ (AIIMS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಈ ಅಪಘಾತ ಸಂಭವಿಸಿದೆ. ಸುಗಮ ಟ್ರಾವೆಲ್ಸ್ (Sugama Travels) ಬಸ್ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿದ್ದ ಸೈನ್‌ಬೋರ್ಡ್‌ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಕಸ್ತೂರಿ ಶಾನ್‌ಭಾಗ್ (64) ಹಾಗೂ ಮಂಗಳೂರಿನ ಬಸ್ ಕ್ಲೀನರ್ ಅಶೋಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಬೆಲ್ಲೂರಿನ ಏಮ್ಸ್ ಆಸ್ಪತ್ರೆಗೆ ರವಂತಿಸಲಾಗಿದೆ.

ಈ ಘಟನೆಯು ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *