Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಳ್ತಂಗಡಿ: 14 ವರ್ಷದ ಶಾಲಾ ಬಾಲಕಿ ಮೇಲೆ ಅತ್ಯಾಚಾರ; ಆಟೋ ಚಾಲಕ ಜಮಾಲುದ್ದೀನ್ ಬಂಧನ!

Spread the love

ಬೆಳ್ತಂಗಡಿ ಅಗಸ್ಟ್ 21: ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದಲ್ಲಿ 14 ವರ್ಷದ ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಟೋ ರಿಕ್ಷಾ ಚಾಲಕ ಜಮಾಲುದ್ದೀನ್ ಎಂಬಾತನನ್ನು ವೇಣೂರು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ.ವೇಣೂರು ನಿವಾಸಿಯಾಗಿರುವ ಆರೋಪಿ ಜಮಾಲುದ್ದೀನ್ ತನ್ನ ಆಟೋ ರಿಕ್ಷಾದಲ್ಲಿ 14 ವರ್ಷದ ಬಾಲಕಿಯನ್ನು ಕಳೆದ ಕೆಲವು ತಿಂಗಳುಗಳಿಂದ ಶಾಲೆಗೆ ಕರೆದೊಯ್ಯುತ್ತಿದ್ದನು. ಈ ವೇಳೆ ಆಕೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಆರೋಪಿಯನ್ನು ಬಾಲಕಿ ಪ್ರತಿರೋಧಿಸಿದಾಗ, ಜೀವಬೆದರಿಕೆ ಒಡ್ಡುತ್ತಿದ್ದನು. ಇದರಿಂದ ಭೀತಿಗೆೊಳಗಾಗಿದ್ದ ಬಾಲಕಿ ಈ ವಿಷಯವನ್ನು ಯಾರಿಗೂ ತಿಳಿಸಿರಲಿಲ್ಲ.
ಆಗಸ್ಟ್ 13, 2026ರಂದು ಸಂಜೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಮನೆಗೆ ಅಕ್ರಮವಾಗಿ ನುಗ್ಗಿದ ಆರೋಪಿ ಜಮಾಲುದ್ದೀನ್, ಬೆದರಿಕೆಯೊಡ್ಡಿ ಅತ್ಯಾಚಾರ ಎಸಗಿದ್ದಾನೆ. ಈ ಕುರಿತು ಸಂತ್ರಸ್ತ ಬಾಲಕಿ ಆಗಸ್ಟ್ 15, 2026ರಂದು ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS 2023) ಕಲಂ 75(2), 64(1), 65(1), 351(3) ಹಾಗೂ ಪೋಕ್ಸೋ ಕಾಯ್ದೆ (POCSO Act 2012) ಕಲಂ 4(2), 8, 12 ರ ಅಡಿಯಲ್ಲಿ ಕಠಿಣ ಪ್ರಕರಣ ದಾಖಲಿಸಲಾಗಿದೆ. ಆಗಸ್ಟ್ 15ರಂದು ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


Spread the love
Share:

administrator

Leave a Reply

Your email address will not be published. Required fields are marked *