Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಗಳೂರು: ದಶಕಗಳ ಬೇಡಿಕೆ ಈಡೇರಿಕೆ; ನೈಋತ್ಯ ರೈಲ್ವೆ ಮೈಸೂರು ವಿಭಾಗಕ್ಕೆ ಮಂಗಳೂರು ರೈಲ್ವೆ ಪ್ರದೇಶ ಸೇರ್ಪಡೆ!

Spread the love

ಮಂಗಳೂರು ಅಗಸ್ಟ್ 21: ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೇ ಪ್ರಯಾಣಿಕರ ದಶಕಗಳ ಬಾಕಿ ಬೇಡಿಕೆಯೊಂದು ಕೊನೆಗೂ ಈಡೇರುವ ಹಂತಕ್ಕೆ ತಲುಪಿದೆ. ಪ್ರಸ್ತುತ ದಕ್ಷಿಣ ರೈಲ್ವೆ ವಲಯದ (Southern Railway) ಪಾಲಕ್ಕಾಡ್ ವಿಭಾಗದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಂಗಳೂರು ರೈಲ್ವೆ ಪ್ರದೇಶವನ್ನು ನೈಋತ್ಯ ರೈಲ್ವೆ ವಲಯದ (SWR) ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲು ಭಾರತೀಯ ರೈಲ್ವೆ ಇಲಾಖೆ ನಿರ್ಧರಿಸಿದೆ. ಈ ಕುರಿತು ಮಂಗಳೂರು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮಾಹಿತಿ ನೀಡಿದ್ದಾರೆ.ಹೊಸ ನಿರ್ಧಾರದಂತೆ ಉಳ್ಳಾಲವರೆಗಿನ ಮಂಗಳೂರು ರೈಲ್ವೆ ವ್ಯಾಪ್ತಿಯು ದಕ್ಷಿಣ ರೈಲ್ವೆಯಿಂದ ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ವರ್ಗಾವಣೆಯಾಗಲಿದೆ. ಇದರಿಂದಾಗಿ ದಕ್ಷಿಣ ರೈಲ್ವೆ ಮತ್ತು ನೈಋತ್ಯ ರೈಲ್ವೆ ವಲಯಗಳ ನಡುವಿನ ಇಂಟರ್ಚೇಂಜ್ ಪಾಯಿಂಟ್ (Interchange Point) ಇನ್ನುಮುಂದೆ ಪಡೀಲ್ ಬದಲಿಗೆ ಉಳ್ಳಾಲಕ್ಕೆ ಸ್ಥಳಾಂತರಗೊಳ್ಳಲಿದೆ.


Spread the love
Share:

administrator

Leave a Reply

Your email address will not be published. Required fields are marked *