Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಹಾಬುಬಾಬಾದ್: ಲಾರಿ ಮತ್ತು ಶಾಲಾ ಬಸ್ ಮುಖಾಮುಖಿ ಡಿಕ್ಕಿ; ಭೀಕರ ರಸ್ತೆ ಅಪಘಾ*ತ!

Spread the love

ಮಹಾಬುಬಾಬಾದ್: ಮಹಾಬುಬಾಬಾದ್ ಜಿಲ್ಲೆಯ ಥೋರೂರು ಬಳಿ ಶನಿವಾರ ಅತಿವೇಗವಾಗಿ ಬಂದ ಲಾರಿಯೊಂದು ಶಾಲಾ ಬಸ್ ಜತೆಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸಿದ ಸಮಯದಲ್ಲಿ ಬಸ್‌ನಲ್ಲಿ ಸುಮಾರು 50 ವಿದ್ಯಾರ್ಥಿಗಳು ಇದ್ದರು ಎಂದು ವರದಿಯಾಗಿದೆ. ಅದೃಷ್ಟವಶಾತ್ ಯಾವುದೇ ವಿದ್ಯಾರ್ಥಿಗೆ ಗಾಯಗಳಾಗಿಲ್ಲ, ಎಲ್ಲರೂ ಸುರಕ್ಷಿತವಾಗಿದ್ದಾರೆ.
ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆಂಬ ಮಾಹಿತಿ ತಿಳಿದು ಪೋಷಕರು ಹಾಗೂ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಅಪಘಾತದಿಂದಾಗಿ ಕೆಲಕಾಲ ಸ್ಥಳದಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.


Spread the love
Share:

administrator

Leave a Reply

Your email address will not be published. Required fields are marked *