ಪೆರಂಪಳ್ಳಿ: ಇ-ರಿಕ್ಷಾದಲ್ಲಿ ಕಾಣಿಸಿಕೊಂಡ ಬೆಂಕಿ ಪಕ್ಕದ ಕಾರಿಗೂ ವ್ಯಾಪ; ಯುವಕರ ಸಾಹಸದಿಂದ ತಪ್ಪಿದ ದೊಡ್ಡ ದುರಂತ!

ಉಡುಪಿ: ಪೆರಂಪಳ್ಳಿ ಸಮೀಪ ಭಾನುವಾರ ಬೆಳಿಗ್ಗೆ ಮನೆಯೊಂದರ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ರಿಕ್ಷಾದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಪಕ್ಕದಲ್ಲಿದ್ದ ಕಾರು ಹಾಗೂ ಸ್ಕೂಟರ್‌ಗೂ ವ್ಯಾಪಿಸಿದ ಘಟನೆ ನಡೆದಿದೆ.

ಬೆಳಿಗ್ಗೆ ಸುಮಾರು 11 ಗಂಟೆಯ ವೇಳೆಗೆ ಶೆಡ್‌ನಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ರಿಕ್ಷಾದಲ್ಲಿ ದಿಢೀರ್ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿಯ ಕೆನ್ನಾಲಿಗೆ ಪಕ್ಕದಲ್ಲಿದ್ದ MG ಕಾರು ಹಾಗೂ ಸ್ಕೂಟರ್‌ಗೂ ಆವರಿಸಿದೆ. ಈ ವೇಳೆ ಮನೆಯಲ್ಲಿ ತೀವ್ರ ಬೆನ್ನುನೋವಿನಿಂದ ಬಳಲುತ್ತಿದ್ದ ಯಜಮಾನರು ಸಹಾಯಕ್ಕಾಗಿ ಬೊಬ್ಬೆ ಹೊಡೆದಿದ್ದಾರೆ. ಅದೇ ಮಾರ್ಗವಾಗಿ ತೆರಳುತ್ತಿದ್ದ ಇಂಜಿನಿಯರ್ ಮನೋಜ್ ಹಾಗೂ ಯುವ ಉದ್ಯಮಿ ಶರತ್ ಎಂಬವರು ತಕ್ಷಣ ಸ್ಥಳಕ್ಕೆ ಧಾವಿಸಿ, ಉರಿಯುತ್ತಿದ್ದ ಬೆಂಕಿಯ ನಡುವೆಯೇ MG ಕಾರನ್ನು ಹೊರತೆಗೆದು ಹೆಚ್ಚಿನ ಹಾನಿಯಾಗುವುದನ್ನು ತಪ್ಪಿಸಿದ್ದಾರೆ.ಬಳಿಕ ನೀರು ಹಾಗೂ ಮಣ್ಣು ಬಳಸಿ ಬೆಂಕಿ ನಿಯಂತ್ರಣಕ್ಕೆ ಯತ್ನಿಸಿ, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದು, ಯುವಕರ ಸಮಯಪ್ರಜ್ಞೆಯಿಂದ ಬೆಂಕಿ ಮನೆಗೆ ವ್ಯಾಪಿಸುವುದು ತಪ್ಪಿದೆ.