ತೆಲಂಗಾಣ: ಖಾಸಗಿ ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ; 6 ಮಂದಿ ಸಾವು, ಹಲವರಿಗೆ ಗಾಯ!

ಹೈದರಾಬಾದ್: ತೆಲಂಗಾಣದ ಸೂರ್ಯಪೇಟೆಯಲ್ಲಿ ಖಾಸಗಿ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಇಂದು ಬೆಳಗ್ಗಿನ ಜಾವ 5:20ರ ಸುಮಾರಿಗೆ ಘಟನೆ ಸಂಭವಿಸಿದೆ. ಹೈದರಾಬಾದ್‌ನಿಂದ ವಿಜಯವಾಡಕ್ಕೆ ತೆರಳುತ್ತಿದ್ದಾಗ ದುರ್ಗಾಪುರಂ ಸ್ಟೇಜ್ ಬಳಿ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದು, ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ಸಮಯದಲ್ಲಿ ಒಟ್ಟು 43 ಪ್ರಯಾಣಿಕರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಗಾಯಾಳು ಪ್ರಯಾಣಿಕರನ್ನು ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಮೃತರ ಶವಗಳನ್ನ ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಕಳುಹಿಸಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಧಾವಿಸಿರುವ ಸ್ಥಳೀಯ ಪೊಲೀಸರು ಘಟನೆಯನ್ನ ಪರಿಶೀಲಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಏನು ಎಂಬುದನ್ನ ಪತ್ತೆಹಚ್ಚುತ್ತಿದ್ದಾರೆ.