Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಗಳೂರು: ಮೊಬೈಲ್ ನೀಡದ್ದಕ್ಕೆ ತಂಗಿಯನ್ನೇ ಸುತ್ತಿಗೆಯಿಂದಹೊಡೆದು ಕೊಲೆ ಮಾಡಿದ್ದ ಅಣ್ಣನಿಗೆ 4 ವರ್ಷ ಜೈಲು ಶಿಕ್ಷೆ!

Spread the love

ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ನಿವಾಸಿ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ.

ನ್ಯಾಯಾಲಯವು ಐಪಿಸಿ ಕಲಂ 304 (II) ಅನ್ವಯ ಅಪರಾಧಿಗೆ 4 ವರ್ಷಗಳ ಸಜಾ ಶಿಕ್ಷೆ ಹಾಗೂ ₹10,000 ದಂಡ ಮತ್ತು ಸಾಕ್ಷ್ಯ ನಾಶಪಡಿಸಿದ ಐಪಿಸಿ ಕಲಂ 201ರ ಅನ್ವಯ 1 ವರ್ಷ ಶಿಕ್ಷೆ ಹಾಗೂ ₹1,000 ದಂಡ ವಿಧಿಸಿ ಸೋಮವಾರ ಆದೇಶ ಹೊರಡಿಸಿದೆ.

2019ರ ಆಕ್ಟೋಬರ್‌ 8 ರ ಮಧ್ಯಾಹ್ನ ಸುಮಾರು 12 ಗಂಟೆಗೆ ಕಂಬಳಪದವಿನಲ್ಲಿರುವ ತನ್ನ ಮನೆಯಲ್ಲಿ ಆರೋಪಿ ಸ್ಯಾಮ್ಸನ್, ತನ್ನ ತಂಗಿ ಫಿಯೋನಾ ಸ್ವೀಡಲ್ ಕುಟಿನ್ಹಾ ಬಳಿ ಮೊಬೈಲ್ ಫೋನ್ ಬಳಸಲು ನೀಡುವಂತೆ ಕೇಳಿದ್ದ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿತ್ತು. ಈ ವೇಳೆ ತೀವ್ರ ಕೋಪಗೊಂಡ ಸ್ಯಾಮ್ಸನ್, ಸುತ್ತಿಗೆಯಿಂದ ತಂಗಿಯ ತಲೆಗೆ ಬಲವಾಗಿ ಹಲ್ಲೆ ನಡೆಸಿ ಆಕೆಯನ್ನು ಕೊಲೆ ಮಾಡಿದ್ದ. ಬಳಿಕ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಆಕೆಯ ಮೃತದೇಹವನ್ನು ಮನೆಯ ಹಿಂಭಾಗದ ಪೊದೆಯಲ್ಲಿ ಬಚ್ಚಿಟ್ಟಿದ್ದನು.

ಘಟನೆಯ ಬಳಿಕ ಮಗಳು ಕಾಣೆಯಾಗಿದ್ದಾಳೆ ಎಂದು ಮೃತ ಫಿಯೋನಾರ ತಂದೆ ಫ್ರಾನ್ಸಿಸ್ ಕುಟಿನ್ಹಾ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ಪೊಲೀಸರು ಅಪಹರಣ ಪ್ರಕರಣ (ಕಲಂ 363 ಐಪಿಸಿ) ದಾಖಲಿಸಿಕೊಂಡಿದ್ದರು. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಮಂಗಳೂರು ದಕ್ಷಿಣ ಉಪವಿಭಾಗದ ಅಂದಿನ ಎಸಿಪಿ ಟಿ. ಕೋದಂಡ ರಾಮ್ ಅವರು, ತನಿಖೆ ನಡೆಸಿ ಕೊಲೆ ರಹಸ್ಯವನ್ನು ಬಯಲಿಗೆಳೆದಿದ್ದರು. ತನಿಖೆ ಪೂರ್ಣಗೊಳಿಸಿದ ಪೊಲೀಸರು, 2020ರ ಜನವರಿ 10 ರಂದು ನ್ಯಾಯಾಲಯಕ್ಕೆ ಕಲಂ 302 ಮತ್ತು 201 ಐಪಿಸಿ ಅಡಿಯಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ಸಮಗ್ರ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು, ದಿನಾಂಕ 24-08-2026 ರಂದು ಆರೋಪಿಗೆ ಶಿಕ್ಷೆ ಪ್ರಕಟಿಸಿದೆ. ಅಭಿಯೋಜನ ಪರವಾಗಿ ಜ್ಯೋತಿ ಪ್ರಮೋದ ನಾಯಕ್ ವಾದ ಮಂಡಿಸಿದ್ದರು.


Spread the love
Share:

administrator

Leave a Reply

Your email address will not be published. Required fields are marked *