Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಛತ್ತೀಸ್‌ಗಢ: ಲ್ಯಾಂಡಿಂಗ್ ವೇಳೆ ವಿಮಾನದ ಟೈರ್ ಸ್ಫೋಟ; ಕೂದಲೆಳೆ ಅಂತರದಲ್ಲಿ ಪಾರಾದ 41 ಪ್ರಯಾಣಿಕರು!

Spread the love

ಬಿಲಾಸ್‌ಪುರ: ಲ್ಯಾಂಡಿಂಗ್ ವೇಳೆ ವಿಮಾನದ ಟೈರ್ ಸ್ಫೋಟಗೊಂಡಿದ್ದು, ಕೂದಲೆಳೆ ಅಂತರದಲ್ಲಿ 41 ಪ್ರಯಾಣಿಕರು ಪಾರಾಗಿರುವ ಘಟನೆ ಛತ್ತೀಸ್ ಗಢದಲ್ಲಿ ಸಂಭವಿಸಿದೆ

ಶುಕ್ರವಾರ ದೆಹಲಿಯಿಂದ ಬಿಲಾಸ್‌ಪುರಕ್ಕೆ ತೆರಳುತ್ತಿದ್ದ ವಿಮಾನವೊಂದು ಉತ್ತರ ಛತ್ತೀಸ್‌ಗಢದ ಬಿಲಾಸ್‌ಪುರ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವಾಗ ಈ ಅವಘಡ ನಡೆದಿದೆ. ಈ ವಿಮಾನದಲ್ಲಿ 37 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ವಿಮಾನ ಲ್ಯಾಂಡಿಂಗ್ ಆಗುವಾಗ ಅದರ ಎಡಭಾಗದ ಟೈರ್ ಸ್ಫೋಟಗೊಂಡಿದೆ. ಘಟನೆಯ ನಂತರ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗಿದ್ದು, ರನ್‌ವೇಯಿಂದ ಟರ್ಮಿನಲ್ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಯಿತು.ಬಳಿಕ ಬಿಲಾಸ್‌ಪುರದಿಂದ ಮುಂದಿನ ಪ್ರಯಾಣಕ್ಕಾಗಿ ನಿಗದಿಯಾಗಿದ್ದ ವಿಮಾನದ ಹಾರಾಟವನ್ನು ವಿಮಾನಯಾನ ಸಂಸ್ಥೆಯು ರದ್ದುಗೊಳಿಸಿತು. ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *