Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾ*ರ ಎಸಗಿ ಪರಾರಿಯಾಗಿದ್ದ ಆರೋಪಿಯ ಬಂಧನ!

Spread the love

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಅತ್ಯಾಚಾರವೆಸಗಿ, ಪ್ರಾಣಬೆದರಿಕೆಯೊಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ ಆರೋಪಿಯನ್ನು ಧರ್ಮಸ್ಥಳ ಠಾಣಾ ಪೊಲೀಸರು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಂಧಿಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ. ಆಂಧ್ರಪ್ರದೇಶದ ಜಂಗಲ್ಪಲ್ಲಿ ನಿವಾಸಿ ಶ್ರೀಕಾಂತ್ (21) ಬಂಧಿತ ಆರೋಪಿ.

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯ ಮೇಲೆ ಆರೋಪಿ ಶ್ರೀಕಾಂತ್ 2025ರ ಸೆಪ್ಟೆಂಬರ್‌ನಿಂದ ನವೆಂಬರ್ ಅವಧಿಯಲ್ಲಿ ಬಲವಂತವಾಗಿ ಅತ್ಯಾಚಾರವೆಸಗಿದ್ದನು. ಅಲ್ಲದೆ, ಈ ವಿಷಯವನ್ನು ಯಾರಿಗೂ ತಿಳಿಸದಂತೆ ಆಕೆಗೆ ಪ್ರಾಣಬೆದರಿಕೆ ಒಡ್ಡಿದ್ದನು. ಘಟನೆಯಿಂದಾಗಿ ಗರ್ಭಿಣಿಯಾಗಿದ್ದ ಬಾಲಕಿ, ಇತ್ತೀಚೆಗೆ ಮಗುವಿಗೆ ಜನ್ಮ ನೀಡಿದ್ದಳು.

ಈ ಕುರಿತು ಸಂತ್ರಸ್ತೆಯ ಕಡೆಯವರು ನೀಡಿದ ದೂರಿನನ್ವಯ ಆಗಸ್ಟ್ 23, 2026 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಹಾಗೂ ಪೋಕ್ಸೋ ಕಾಯ್ದೆಯ ಕಲಂ 4(2), 6ರ ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾಗುತ್ತಿದ್ದಂತೆ ಬಂಧನ ಭೀತಿಯಿಂದ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯ ಸುಳಿವು ಪತ್ತೆಹಚ್ಚಿದ ಧರ್ಮಸ್ಥಳ ಠಾಣಾ ಪಿಎಸ್‌ಐ ಸಮರ್ಥ್ ಆರ್. ಗಾಣಿಗೇರ ನೇತೃತ್ವದ ಪೊಲೀಸ್ ತಂಡವು ಕಾರ್ಯಾಚರಣೆ ನಡೆಸಿ, ಆಗಸ್ಟ್ 25 ರಂದು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿ ಶ್ರೀಕಾಂತ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.


Spread the love
Share:

administrator

Leave a Reply

Your email address will not be published. Required fields are marked *