ಚಲಿಸುತ್ತಿದ್ದ ಬಸ್ನಿಂದ ಜಾರಿದ ವೃದ್ಧ: ಕ್ಲೀನರ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ಕಣ್ಣೂರು : ಚಲಿಸುತ್ತಿದ್ದ ಖಾಸಗಿ ಬಸ್ ಹತ್ತಲು ಪ್ರಯತ್ನಿಸುವಾಗ ಸಮತೋಲನ ಕಳೆದುಕೊಂಡು ಕೆಳಗೆ ಬೀಳುವ ಹಂತದಲ್ಲಿದ್ದ ವೃದ್ಧ ಪ್ರಯಾಣಿಕನೊಬ್ಬನನ್ನು ಬಸ್ ಸಿಬ್ಬಂದಿ (ಕ್ಲೀನರ್) ಸಮಯಪ್ರಜ್ಞೆಯಿಂದ ರಕ್ಷಿಸಿರುವ ಘಟನೆ ಕಣ್ಣೂರಿನಲ್ಲಿ ನಡೆದಿದೆ. ಕಣ್ಣೂರಿನಿಂದ ಕುಟ್ಟಿಯತ್ತೂರಿಗೆ ಪ್ರಯಾಣಿಸುತ್ತಿದ್ದ ‘ಪಾರ್ವತಿ’ ಹೆಸರಿನ ಖಾಸಗಿ ಬಸ್ನಲ್ಲಿ ಈ ಘಟನೆ ಸಂಭವಿಸಿದೆ.ಬೆಳಿಗ್ಗೆ ಸುಮಾರು 8.45ರ ವೇಳೆಗೆ ‘ಪಾಠಮ್ ಮೈಲಿ’ ಎಂಬಲ್ಲಿ ಬಸ್ ಚಲಿಸುತ್ತಿದ್ದಾಗ ವೃದ್ಧ ಪ್ರಯಾಣಿಕರೊಬ್ಬರು ಬಸ್ ಹತ್ತಲು ಯತ್ನಿಸಿದ್ದಾರೆ. ಈ ವೇಳೆ ದಿಢೀರನೆ ಸಮತೋಲನ ಕಳೆದುಕೊಂಡ ಅವರು ಬಸ್ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಳ್ಳುವ ಅಪಾಯದಲ್ಲಿ ದ್ದರು. ಇದನ್ನು ತಕ್ಷಣವೇ ಗಮನಿಸಿದ ಬಸ್ ಸಿಬ್ಬಂದಿ ಅತುಲ್, ಅಪಾಯದಲ್ಲಿದ್ದ ವೃದ್ಧನನ್ನು ಚುರುಕಿನಿಂದ ಹಿಡಿದು ಒಳಗಡೆ ಎಳೆದುಕೊಂಡಿದ್ದಾರೆ. ಈ ಮೂಲಕ ದೊಡ್ಡ ಅಪಘಾತವೊಂದು ತಪ್ಪಿದಂತಾಗಿದೆ.ಬಸ್ನಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಇಡೀ ರೋಚಕ ದೃಶ್ಯಾವಳಿಗಳು ಸೆರೆಯಾಗಿವೆ. ಅತುಲ್ ಸಮಯಪ್ರಜ್ಞೆಯಿಂದ ವೃದ್ಧನನ್ನು ರಕ್ಷಿಸುವ ವೇಳೆ ಮತ್ತೊಬ್ಬ ಪ್ರಯಾಣಿಕನೂ ನೆರವಿಗೆ ಧಾವಿಸುವುದು ಸಿಸಿಟಿವಿ ವಿಡಿಯೋದಲ್ಲಿ ಕಂಡುಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಪ್ರಸಾರವಾಗುತ್ತಿದ್ದಂತೆ ವ್ಯಾಪಕವಾಗಿ ವೈರಲ್ ಆಗಿದೆ. ಅತುಲ್ ಅವರ ತ್ವರಿತ ಕಾರ್ಯವೈಖರಿ ಹಾಗೂ ಜಾಗರೂಕತೆಗೆ ನೆಟ್ಟಿಗರು ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
