Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಾರವಾರ: ಅರಬ್ಬಿ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್; ಇತರೆ ಬೋಟ್‌ಗಳ ಸಿಬ್ಬಂದಿಯಿಂದ 24 ಮೀನುಗಾರರ ರಕ್ಷಣೆ

Spread the love

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದ್ದು, ಅದರಲ್ಲಿದ್ದ 24 ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಇತರೆ ಬೋಟ್‌ಗಳ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಕಾರವಾರದ ಅರಬ್ಬಿ ಸಮುದ್ರ ಭಾಗದ ಅಂಜದೀವ್ ದ್ವೀಪದ ಸಮೀಪ ನಡೆದಿದೆ.

ಬೆಳಂಬರ್ ಮೂಲದ ನೀಲಕಂಠ ಖಾರ್ವಿ ಅವರಿಗೆ ಸೇರಿದ ‘ಶ್ರೀ ಮಾತಾ’ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಅವಘಡಕ್ಕೀಡಾಗಿ ಮುಳುಗಡೆಯಾಗಿತ್ತು. ವಿಷಯ ತಿಳಿದ ತಕ್ಷಣ ಸಮೀಪದಲ್ಲಿದ್ದ ಐದಾರು ಮೀನುಗಾರಿಕಾ ಬೋಟ್‌ಗಳು ಸ್ಥಳಕ್ಕೆ ಧಾವಿಸಿ, ಬೋಟ್‌ನಲ್ಲಿದ್ದ ಎಲ್ಲಾ 24 ಮೀನುಗಾರರನ್ನು ರಕ್ಷಿಸಿವೆ.ಮುಳುಗುತ್ತಿದ್ದ ಬೋಟ್ ಅನ್ನು ಇತರೆ ಬೋಟ್‌ಗಳಿಗೆ ಹಗ್ಗ ಕಟ್ಟಿ ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಅದು ಸಮುದ್ರದಲ್ಲಿ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಘಟನೆಯಲ್ಲಿ ಸುಮಾರು 50 ಲಕ್ಷ ರೂ.ಗೂ ಅಧಿಕ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *