Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಧಾರವಾಡ: ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ; ಮೂವರು ದಾವಣಗೆರೆ ಮೂಲದ ಯುವಕರು ಸ್ಥಳದಲ್ಲೇ ಸಾ*ವು!

Spread the love

ಧಾರವಾಡ : ರಾಷ್ಟ್ರೀಯ ಹೆದ್ದಾರಿ 4ರ ಧಾರವಾಡ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟು, ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿರುವ ಭೀಕರ ಘಟನೆ ಬೆಳಗಿನ ಜಾವ ಸಂಭವಿಸಿದೆ.

ಮೃತರನ್ನು ದಾವಣಗೆರೆ ಮೂಲದ ವಿನಾಯಕ್ (25), ಮಂಜುನಾಥ್ (29) ಹಾಗೂ ಬಸವರಾಜ (34) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಅಭಿಷೇಕ್, ಅಜಯ್ ಹಾಗೂ ಬಸನಗೌಡ ಎಂಬುವವರನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿಯ ಪ್ರಕಾರ, ಕಾರು ಬೆಳಗಾವಿ ಕಡೆಯಿಂದ ದಾವಣಗೆರೆಯತ್ತ ತೆರಳುತ್ತಿತ್ತು. ಧಾರವಾಡದ ವೆಂಕಟಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ, ಮುಂಭಾಗದಲ್ಲಿದ್ದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿ ಡಿವೈಡರ್‌ಗೆ ರಭಸವಾಗಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮೂವರು ತೀವ್ರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಗರಗ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ ಗಂಗೋಳ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *