Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಲಬುರಗಿ: ವಾಡಿ ಹೊರವಲಯದಲ್ಲಿ ಲಾರಿ-ಆಟೋ ಮುಖಾಮುಖಿ ಢಿಕ್ಕಿ; ಮೂರು ತಿಂಗಳ ಮಗು ಹಾಗೂ ತಾಯಿ ದಾರುಣ ಸಾ*ವು!

Spread the love

ಕಲಬುರಗಿ : ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಹಾಗೂ ಆಟೋ ರಕ್ಷೋ ಮಧ್ಯೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಮೂರು ತಿಂಗಳ ಮಗು ಮತ್ತು ತಾಯಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಾಡಿ ಪಟ್ಟಣದ ನಿವಾಸಿ ಶರಣಮ್ಮ ಸಿಂಘೆ (30) ಹಾಗೂ ಆಕೆಯ ಮೂರು ತಿಂಗಳ ಗಂಡು ಮಗು ರಾಘವೇಂದ್ರ ಸಿಂಘೆ ಮೃತ ದುರ್ದೈವಿಗಳು.

ಅಪಘಾತದಲ್ಲಿ ಮೃತ ಶರಣಮ್ಮ ಅವರ ಅತ್ತೆ ಸಾಬಮ್ಮ ಹಾಗೂ ಆಟೋ ಚಾಲಕ ಖಾಜಾ ಪಟೇಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಮೂರು ತಿಂಗಳ ಹಿಂದೆ ಸಿಜೇರಿಯನ್ ಹೆರಿಗೆಯಾಗಿದ್ದ ಶರಣಮ್ಮ ಅವರು, ಶಸ್ತ್ರಚಿಕಿತ್ಸೆಯ ಹೊಲಿಗೆ ಬಿಚ್ಚಿಸಿಕೊಂಡು ಬರಲು ತಮ್ಮ ಮಗು ಹಾಗೂ ಅತ್ತೆಯೊಂದಿಗೆ ಯಾದಗಿರಿಯ ಆಸ್ಪತ್ರೆಗೆ ತೆರಳಿದ್ದರು. ಆಸ್ಪತ್ರೆಯ ಕೆಲಸ ಮುಗಿಸಿ ಆಟೋದಲ್ಲಿ ಮನೆಗೆ ವಾಪಸ್ ಬರುವಾಗ ಹಲಕರ್ಟಿ ಸಮೀಪ ಎದುರಿನಿಂದ ವೇಗವಾಗಿ ಬಂದ ಲಾರಿ ಆಟೋಗೆ ಭೀಕರವಾಗಿ ಢಿಕ್ಕಿ ಹೊಡೆದಿದೆ.
ಢಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ತಾಯಿ-ಮಗು ಪ್ರಾಣ ಕಳೆದುಕೊಂಡಿದ್ದಾರೆ. ಈ ದುರ್ಘಟನೆಗೆ ಸಂಬಂಧಿಸಿದಂತೆ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *