ಸಕಲೇಶಪುರ: ಕೆಎಸ್ಆರ್ಟಿಸಿ ಬಸ್ ಹಾಗೂ ಎಟಿಎಂ ಹಣ ಸಾಗಿಸುತ್ತಿದ್ದ ಬೊಲೆರೊ ವಾಹನ ಮುಖಾಮುಖಿ ಢಿಕ್ಕಿ; ಒಬ್ಬ ವ್ಯಕ್ತಿ ಸಾ*ವು, ನಾಲ್ವರಿಗೆ ಗಾಯ!

ಹಾಸನ: ಕೆಎಸ್ಆರ್ಟಿಸಿ ಬಸ್ ಬೊಲೆರೊ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಗುರುವಾರ ಸಂಭವಿಸಿದೆ.ಮೃತರನ್ನು ದಿನೇಶ್ (38) ಎಂದು ಗುರುತಿಸಲಾಗಿದ್ದು, ಗಾಯಗೊಂಡವರನ್ನು ಸುಬ್ರಹ್ಮಣ್ಯ, ವೆಂಕಟರಮಣ, ಜಿತೇಂದ್ರ ಮತ್ತು ದುರ್ಗಾಪ್ರಸಾದ್ ಎಂದು ಗುರುತಿಸಲಾಗಿದೆ.ವರದಿಗಳ ಪ್ರಕಾರ, ಐಸಿಐಸಿಐ ಬ್ಯಾಂಕ್ಗೆ ಸೇರಿದ ಬೊಲೆರೊ ಪಿಕಪ್ ವಾಹನವು ಎಟಿಎಂಗಳಿಗೆ ಹಣವನ್ನು ಸಾಗಿಸುತ್ತಿದ್ದಾಗ, ಮಂಗಳೂರಿನಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ.ಗಾಯಾಳುಗಳು ಕೊಡಗು ಮತ್ತು ಮಂಗಳೂರಿನವರು ಎಂದು ವರದಿಯಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸಕಲೇಶಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
