Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹೊಸದಿಲ್ಲಿ: ಮಹಿಳಾ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಬರೆದ ಉಪನಾಯಕಿ ಸ್ಮೃತಿ ಮಂಧಾನ!

Spread the love

ಹೊಸದಿಲ್ಲಿ: ಮಹಿಳಾ ಕ್ರಿಕೆಟ್ ಶ್ರೇಷ್ಠ ಬ್ಯಾಟರ್ ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ಭಾರತ ತಂಡದ ಉಪನಾಯಕಿ ಸ್ಮೃತಿ ಮಂಧಾನ ಗುರುವಾರ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಮಹಿಳಾ ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ದುಬೈನಲ್ಲಿ ನಡೆದ ಮಹಿಳಾ ಏಷ್ಯಾ ಕಪ್ 2026ರ ಹಾಂಗ್‌ಕಾಂಗ್ ವಿರುದ್ಧದ ಪಂದ್ಯದಲ್ಲಿ ಭಾರತದ ಮಾಜಿ ನಾಯಕಿ ಮಿಥಾಲಿ ರಾಜ್ ಅವರ 10,868 ಅಂತರರಾಷ್ಟ್ರೀಯ ರನ್ ಗಳ ದಾಖಲೆಯನ್ನು ಹಿಂದಿಕ್ಕಿದ ಮಂಧಾನ, ಒಟ್ಟು 10,880 ರನ್ ಗಳೊಂದಿಗೆ ಮಹಿಳಾ ಕ್ರಿಕೆಟ್ ನ ಎಲ್ಲಾ ಮಾದರಿಗಳಲ್ಲಿ ಗರಿಷ್ಠ ರನ್ ಕಲೆಹಾಕಿದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಕೇವಲ 64 ಎಸೆತಗಳಲ್ಲಿ 14 ಬೌಂಡರಿ ಹಾಗೂ 7 ಸಿಕ್ಸರ್ಗಳ ನೆರವಿನಿಂದ 193.75ರ ಸ್ಟೈಕ್ರೆಟ್ ನಲ್ಲಿ 124 ರನ್ ಸಿಡಿಸಿದ ಮಂಧಾನ, ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಅವರ ಭರ್ಜರಿ ಇನಿಂಗ್ಸ್ ನ ನೆರವಿನಿಂದ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 193 ರನ್ ಗಳ ಬೃಹತ್ ಮೊತ್ತ ಕಲೆಹಾಕಿತು.
ಥಾಯ್ಲೆಂಡ್ ವಿರುದ್ಧದ ಏಷ್ಯಾ ಕಪ್ನ ಮೊದಲ ಪಂದ್ಯದಲ್ಲೇ ನ್ಯೂಜಿಲೆಂಡ್ನ ಸುಜಿ ಬೇಟ್ಸ್ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ್ದ 30 ವರ್ಷದ ಮಂಧಾನ, ಮಿಥಾಲಿ ರಾಜ್ ಅವರ ಸಾರ್ವಕಾಲಿಕ ದಾಖಲೆಯನ್ನು ಮುರಿಯಲು ಕೇವಲ ಕೆಲವೇ ರನ್ ಗಳ ಅಂತರದಲ್ಲಿದ್ದರು.

ಆರಂಭದಲ್ಲಿ ಮಂದಗತಿಯ ಪಿಚ್ಚಲ್ಲಿ ಎಚ್ಚರಿಕೆಯಿಂದ ಬ್ಯಾಟಿಂಗ್ ಮಾಡಿದ ಮಂಧಾನ, ಅರ್ಧಶತಕ ಪೂರೈಸಿದ ಬಳಿಕ ಬಿರುಸಿನ ಬ್ಯಾಟಿಂಗ್‌ ನಡೆಸಿದರು. ಕೇವಲ 17 ಎಸೆತಗಳಲ್ಲಿ 50ರಿಂದ 100 ರನ್ ಗೆ ತಲುಪಿದ ಅವರು, ಒಟ್ಟು 57 ಎಸೆತಗಳಲ್ಲಿ ಶತಕ ಪೂರೈಸಿದರು. ಇದು ಅವರ ಟಿ20 ಅಂತರರಾಷ್ಟ್ರೀಯ ವೃತ್ತಿಜೀವನದ ಎರಡನೇ ಶತಕವಾಗಿದೆ.
ಇನಿಂಗ್ಸ್‌ ನ ಕೊನೆಯ ಓವರ್ ನಲ್ಲಿ ಭಾರತಿ ಫುಲ್ಮಾಲಿ ಅವರೊಂದಿಗೆ ಉಂಟಾದ ಗೊಂದಲದಿಂದ ರನೌಟ್ ಆದರೂ, ಅಷ್ಟರಲ್ಲಾಗಲೇ ಹಲವು ದಾಖಲೆಗಳು ಮಂಧಾನ ಅವರ ಹೆಸರಿಗೆ ಸೇರ್ಪಡೆಯಾಗಿದ್ದವು. ಅವರ 124 ರನ್ ಗಳು ಮಹಿಳಾ ಟಿ20 ಏಷ್ಯಾ ಕಪ್ ಇತಿಹಾಸದಲ್ಲೇ ವೈಯಕ್ತಿಕ ಗರಿಷ್ಠ ಸ್ಕೋರ್ ಎನಿಸಿಕೊಂಡವು. ಈ ಮೂಲಕ 2024ರಲ್ಲಿ ಮಲೇಷ್ಯಾ ವಿರುದ್ಧ ಚಾಮರಿ ಅಟಪಟ್ಟು ಗಳಿಸಿದ್ದ ಅಜೇಯ 119 ರನ್ ಗಳ ದಾಖಲೆಯನ್ನು ಮಂಧಾನ ಮುರಿದರು.

ಮಹಿಳಾ ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರು

  • ಸ್ಮೃತಿ ಮಂಧಾನ (ಭಾರತ): 10,880* ರನ್
    ಮಿಥಾಲಿ ರಾಜ್ (ಭಾರತ): 10,868 ರನ್
    ಸುಜಿ ಬೇಟ್ಸ್ (ನ್ಯೂಜಿಲೆಂಡ್): 10,740 ರನ್
    ಷಾರ್ಲೆಟ್ ಎಡ್ವರ್ಡ್ಸ್ (ಇಂಗ್ಲೆಂಡ್): 10,273 ರನ್
    ಸ್ಟೆಫಾನಿ ಟೇಲರ್ (ವೆಸ್ಟ್ ಇಂಡೀಸ್): 10,007 ರನ್
    ಹಲವು ದಾಖಲೆಗಳು
    ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಮಂಧಾನ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಇದು ಅವರ ವೃತ್ತಿಜೀವನದ 18ನೇ ಅಂತರರಾಷ್ಟ್ರೀಯ ಶತಕವಾಗಿದ್ದು, ಮಹಿಳಾ ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಮೆಗ್ ಲ್ಯಾನಿಂಗ್ ಹಾಗೂ ದಕ್ಷಿಣ ಆಫ್ರಿಕಾದ ಲಾರಾ ವೊಲ್ವಾರ್ಡ್ ತಲಾ 17 ಶತಕಗಳೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ.
    ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಎರಡು ಶತಕ ಸಿಡಿಸಿದ ಮೊದಲ ಭಾರತೀಯ ಮಹಿಳಾ ಆಟಗಾರ್ತಿ ಎಂಬ ದಾಖಲೆಯನ್ನೂ ಮಂಧಾನ ನಿರ್ಮಿಸಿದರು. ಅವರು ಈ ಮೊದಲು 2025ರಲ್ಲಿ ಇಂಗ್ಲೆಂಡ್ ವಿರುದ್ಧ ತಮ್ಮ ಮೊದಲ ಟಿ20 ಅಂತರರಾಷ್ಟ್ರೀಯ ಶತಕ ದಾಖಲಿಸಿದ್ದರು.
    ಇದರೊಂದಿಗೆ ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂಧಾನ ಜೋಡಿ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ 29ನೇ ಬಾರಿ 50ಕ್ಕೂ ಹೆಚ್ಚು ರನ್ ಗಳ ಜೊತೆಯಾಟ ದಾಖಲಿಸುವ ಮೂಲಕ ಜಾಗತಿಕ ದಾಖಲೆ ನಿರ್ಮಿಸಿತು.

Spread the love
Share:

administrator

Leave a Reply

Your email address will not be published. Required fields are marked *