ಯಾದಗಿರಿ ಬಂದ್ಗೆ ವ್ಯಾಪಕ ಬೆಂಬಲ: ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಸರ್ವ ಸಂಘಟನೆಗಳಿಂದ ಪ್ರತಿಭಟನೆ!

ಯಾದಗಿರಿ : ಗುರಮಠಕಲ್ ಹಾಗೂ ಯಾದಗಿರಿ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ಒತ್ತಾಯಿಸಿ ಸರ್ವ ಸಂಘಟನೆಗಳ ಹೋರಾಟ ಸಮಿತಿ ಕರೆ ನೀಡಿದ್ದ ಯಾದಗಿರಿ ಬಂದ್ಗೆ ಸೋಮವಾರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಬೆಳಗ್ಗೆಯಿಂದಲೇ ನಗರದ ಬಹುತೇಕ ಅಂಗಡಿ-ಮುಂಗಟ್ಟುಗಳು ಮುಚ್ಚಲ್ಪಟ್ಟಿದ್ದವು. ಕೆಲವೆಡೆ ಅಂಗಡಿಗಳು ತೆರೆದಿದ್ದರೂ ಪ್ರತಿಭಟನಾಕಾರರು ಅಂಗಡಿ ಮಾಲಕರನ್ನು ಮನವೊಲಿಸಿ ಬಂದ್ಗೆ ಬೆಂಬಲಿಸುವಂತೆ ಮನವಿ ಮಾಡಿದರು.
ಸಾರಿಗೆ ಸಂಸ್ಥೆ ಬಸ್ ಗಳು ಸಹ ರಸ್ತೆಗಿಳಿಯದ ಕಾರಣ ಪ್ರಯಾಣಿಕರು ಪರದಾಡುವಂತಾಯಿತು.ಇತ್ತ ಖಾಸಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
