Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು: ಅಂಗಡಿಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ; ಅವಧಿ ಮೀರಿದ ವಸ್ತುಗಳ ವಶ!

Spread the love

ಬೆಂಗಳೂರು: ನಗರದ ವಿವಿಧೆಡೆ ಆಹಾರ ಮತ್ತು ದಿನಬಳಕೆ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲಿಂಗರಾಜಪುರಂನಲ್ಲಿರುವ ಲಿಯೋ ಮಾರ್ಟ್, ಸ್ವಿಗ್ಗಿ ಇನ್ಸ್ಟಾಮಾರ್ಟ್ ಸೇರಿದಂತೆ ಹಲವು ಮಳಿಗೆಗಳಲ್ಲಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ವೇಳೆ ಸೇವಿಸಲು ಯೋಗ್ಯವಲ್ಲದ ಹಾಗೂ ಅವಧಿ ಮೀರಿದ ಕೆಲವು ಆಹಾರ ವಸ್ತುಗಳನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ.ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟದ ಕುರಿತು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ, ನಿಯಮ ಉಲ್ಲಂಘಿಸಿರುವ ಅಂಗಡಿಗಳು ಹಾಗೂ ಕಂಪನಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ. ಜನರ ಆರೋಗ್ಯದೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದ್ದು, ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವ ಮಳಿಗೆಗಳ ವಿರುದ್ಧ ಮುಂದಿನ ದಿನಗಳಲ್ಲೂ ತಪಾಸಣೆ ಹಾಗೂ ಕ್ರಮ ಮುಂದುವರಿಯಲಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ..


Spread the love
Share:

administrator

Leave a Reply

Your email address will not be published. Required fields are marked *