Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಡ್ಯ: ಮೈಶುಗರ್ ಕಾರ್ಖಾನೆ ಬಾಯ್ಲರ್‌ಗೆ ಬಿದ್ದು ಗುತ್ತಿಗೆ ಕಾರ್ಮಿಕ ದುರ್ಮರ*ಣ – ಆಡಳಿತ ಮಂಡಳಿ ವಿರುದ್ಧ ಆಕ್ರೋಶ!

Spread the love

ಮಂಡ್ಯ: ಮೈಶುಗರ್‌ ಕಾರ್ಖಾನೆ (Mysugar Factory) ಬಾಯ್ಲರ್‌ಗೆ ಬಿದ್ದು ಕಾರ್ಮಿಕನೊಬ್ಬ ದುರ್ಮರಣಕ್ಕೀಡಾದ ಘಟನೆ ನಡೆದಿದೆ.

ಕೆ.ಶೆಟ್ಟಿಹಳ್ಳಿಯ ಚರಣ್ ಕುಮಾರ್ (33) ಮೃತ ಕಾರ್ಮಿಕ. ಆಡಳಿತ ಮಂಡಳಿ ನಿರ್ಲಕ್ಷ್ಯಕ್ಕೆ ಕಾರ್ಮಿಕ ಸಾವನ್ನಪ್ಪಿದ್ದಾನೆಂದು ಆರೋಪಿಸಲಾಗಿದೆ. ಮೃತ ಕಾರ್ಮಿಕನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಕಾರ್ಖಾನೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಶ್ರೇಯ ಏಜೆನ್ಸಿಯಡಿ ಗುತ್ತಿಗೆ ಆಧಾರದಲ್ಲಿ ಚರಣ್‌ ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದ್ದ. ಸೆಪ್ಟೆಂಬರ್ 3ರಂದು ಬಾಯ್ಲರ್‌ಗೆ ಬಿದ್ದಿದ್ದ. ಆತನನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಕಾರ್ಮಿಕ ಮೃತಪಟ್ಟಿದ್ದಾನೆ.


Spread the love
Share:

administrator

Leave a Reply

Your email address will not be published. Required fields are marked *