ಪ್ರೇಮ ಪಾಶಕ್ಕೆ ಬಿದ್ದು ಲಕ್ಷಾಂತರ ರೂ. ಕಳೆದುಕೊಂಡ ಖ್ಯಾತ ಟ್ಯಾಟೂ ಆರ್ಟಿಸ್ಟ್!

ಮಿಲಿಯನ್ಗಟ್ಟಲೆ ಫಾಲೋವರ್ಸ್ ಹೊಂದಿರುವ ಘೋಸ್ಟ್ ಟ್ಯಾಟೂ ಆರ್ಟಿಸ್ಟ್ ಅರ್ಜುನ್ ಬಾಬು, ಆಂಟಿ ನಂಟಿನ ಮೋಹಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾನೆ ಎನ್ನಲಾಗಿದೆ.

ಎರಡು ವರ್ಷಗಳ ಹಿಂದೆ ಬ್ಯಾಡರಹಳ್ಳಿಯಲ್ಲಿ ಸಂಪ್ರಿತಾ ಎಂಬ ಮಹಿಳೆ ಅರ್ಜುನ್ಗೆ ಪರಿಚಯವಾಗಿದ್ದಳು. ಮದುವೆಯಾಗುವುದಾಗಿ ಭರವಸೆ ನೀಡಿದ್ದ ಆಕೆ, ಹಣ ಪಡೆದ ಬಳಿಕ ಮದುವೆಯನ್ನು ಮುಂದೂಡುತ್ತಲೇ ಬಂದಿದ್ದಾಳೆ ಎನ್ನಲಾಗಿದೆ.
ಸೆಪ್ಟೆಂಬರ್ 2ರಂದು ಆಕೆಯ ಮನೆಗೆ ಹೋದಾಗ, ಮತ್ತೊಬ್ಬ ಪುರುಷನೊಂದಿಗೆ ವಿಡಿಯೋ ಕಾಲ್ನಲ್ಲಿ ಮಾತನಾಡುತ್ತಿದ್ದುದನ್ನು ಕಂಡು ಪ್ರಶ್ನಿಸಿದ್ದಕ್ಕೆ, ಅರ್ಜುನ್ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ತಲೆಗೆ ಗಾಯವಾಗಿ ಆಸ್ಪತ್ರೆಗೆ ದಾಖಲಾದ ಅರ್ಜುನ್, ಸಮಾಜದ ಮರ್ಯಾದೆಗೆ ಅಂಜಿ ಘಟನೆಯನ್ನು ಅಪಘಾತವೆಂದು ಬಿಂಬಿಸಿದ್ದ ಎನ್ನಲಾಗಿದೆ. ಇದೀಗ ಪ್ರಕರಣದ ಸತ್ಯಾಸತ್ಯತೆ ತನಿಖೆಯಿಂದ ಹೊರಬರಬೇಕಿದೆ.