Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಯಚೂರು: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ಯಾಕ್ಟರ್ ಹರಿದು ಇಬ್ಬರು ಬಾಲಕರು ದಾರುಣ ಸಾ*ವು!

Spread the love

ರಾಯಚೂರು: ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಟ್ಯಾಕ್ಸರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿರುವ ದಾರುಣ ಘಟನೆ ನಗರದ ಝಹಿರಾಬಾದ್ ನ ಎಂ.ಈರಣ್ಣ ವೃತ್ತದಲ್ಲಿ ಶುಕ್ರವಾರ ತಡರಾತ್ರಿ ನಡೆದಿರುವುದು ವರದಿಯಾಗಿದೆ.
ಮೃತರನ್ನು ಸುಚಿತ್ (14) ಹಾಗೂ ಚರಣಕುಮಾರ್ (16) ಎಂದು ಗುರುತಿಸಲಾಗಿದೆ. ಝಹಿರಾಬಾದ್‌ ನಿಂದ ನಗರದ ಖಾಸಬಾವಿಗೆ ಗಣೇಶ ವಿಸರ್ಜನೆಗಾಗಿ ಮೆರವಣಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಟ್ಯಾಕ್ಟರ್ ಚಾಲಕ ಬ್ರೇಕ್ ಬದಲು ಆಕಸ್ಮಿಕವಾಗಿ ಎಕ್ಸಿಲರೇಟರ್ ಒತ್ತಿದ್ದರಿಂದ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.
ಟ್ಯಾಕ್ಸರ್ ಚಾಲಕನ ನಿಯಂತ್ರಣ ತಪ್ಪಿ ಮೆರವಣಿಗೆಯಲ್ಲಿದ್ದ ಬಾಲಕರ ಮೇಲೆ ಹರಿದಿದೆ ಎನ್ನಲಾಗಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಯಚೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love
Share:

administrator

Leave a Reply

Your email address will not be published. Required fields are marked *