Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನವದೆಹಲಿ: ಸೌಜನ್ಯ ಅತ್ಯಾಚಾ*ರ ಹಾಗೂ ಕೊ*ಲೆ ಪ್ರಕರಣ – ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ, 3 ತಿಂಗಳ ಗಡುವು!

Spread the love

ನವದೆಹಲಿ : ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದ್ದು, ಪ್ರಕರಣದ ಮರುತನಿಖೆಗೆ (Re-investigation) ಆದೇಶಿಸಿ ಮೂರು ತಿಂಗಳ ಗಡುವು ನೀಡಿದೆ.  ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರ ತನಿಖಾ ದಳ (CBI) ಆರೋಪಿಯನ್ನು ಖುಲಾಸೆಗೊಳಿಸಿ ವರದಿ ಸಲ್ಲಿಸಿತ್ತು. ಇದನ್ನು ಪ್ರಶ್ನಿಸಿ ಸೌಜನ್ಯಾ ತಾಯಿ ಕುಸುಮಾವತಿ ಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಬಳಿಕ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ (SLP) ಸಲ್ಲಿಸಿ ನ್ಯಾಯಕ್ಕಾಗಿ ಹೋರಾಟ ಮುಂದುವರಿಸಿದ್ದರು.

ಈ ಮೇಲ್ಮನವಿ ಅರ್ಜಿಯ ವಿಚಾರಣೆ ವೇಳೆ ಸಿಬಿಐ ತನಿಖೆಯ ಲೋಪದೋಷಗಳನ್ನು ಕಟುವಾಗಿ ಟೀಕಿಸಿದ್ದ ಸುಪ್ರೀಂ ಕೋರ್ಟ್, ಜುಲೈನಲ್ಲಿ ತೀರ್ಪನ್ನು ಕಾಯ್ದಿರಿಸಿತ್ತು. “ವಾಸ್ತವವಾಗಿ ಸಿಬಿಐನ ತನಿಖಾ ಅಧಿಕಾರಿಯೇ ಇಲ್ಲಿ ನ್ಯಾಯಾಧೀಶರಂತೆ ಕಾರ್ಯಾಚರಿಸಿದ್ದಾರೆ. ಹಿಂದೆ ಪೊಲೀಸರು ಸಂಗ್ರಹಿಸಿದ್ದ ಸಾಕ್ಷ್ಯಗಳನ್ನು ಮರುಪರಿಶೀಲಿಸಿ ವರದಿ ಸಲ್ಲಿಸಿದ್ದಾರೆಯೇ ಹೊರತು, ಯಾವುದೇ ಸ್ವತಂತ್ರ ಹಾಗೂ ವೈಜ್ಞಾನಿಕ ತನಿಖೆ ನಡೆಸಿಲ್ಲ. ಇದು ಸಿಬಿಐ ಸಂಸ್ಥೆಯ ತೀರಾ ಕಳಪೆ ಕಾರ್ಯವೈಖರಿಯನ್ನು ಪ್ರತಿಬಿಂಬಿಸುತ್ತದೆ” ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಹಾಗೂ ಸಂಜೀವ್ ಸಚ್‌ದೇವ್ ಅವರಿದ್ದ ಪೀಠವು ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.

ಸಿಬಿಐ ನಡೆಸಿದ ತನಿಖೆಯಲ್ಲಿ ಸ್ವತಂತ್ರತೆ ಕೊರತೆಯಿದ್ದು, ಕಳಪೆ ಮಟ್ಟದ ತನಿಖೆಯಾಗಿದೆ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ಸೌಜನ್ಯಾ ಪ್ರಕರಣದ ಸಂಪೂರ್ಣ ಮರುತನಿಖೆ ನಡೆಸಿ ಮುಂದಿನ 3 ತಿಂಗಳ ಒಳಗಾಗಿ ವರದಿ ಸಲ್ಲಿಸುವಂತೆ ಆದೇಶಿಸಿದೆ. ಸುಪ್ರೀಂ ಕೋರ್ಟ್‌ನ ಈ ಆದೇಶದಿಂದಾಗಿ ಸೌಜನ್ಯಾ ಕುಟುಂಬಸ್ಥರು ಹಾಗೂ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಜನರಲ್ಲಿ ಹೊಸ ಭರವಸೆ ಮೂಡಿದೆ. ಸದ್ಯ ಮುಂದಿನ ತನಿಖೆಯನ್ನು ಯಾರು ನಡೆಸುತ್ತಾರೆ ಎನ್ನುವ ಬಗ್ಗೆ ಸದ್ಯದಲ್ಲೇ ಮಾಹಿತಿ ಹೊರ ಬಿಳಲಿದೆ ಎಂದು ಹೇಳಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *