ವಂಚನೆ ಪ್ರಕರಣದ ಹಣ ಬಿಡುಗಡೆಗೆ ಲಂಚ: ಬಜಪೆ ಇನ್ಸ್ಪೆಕ್ಟರ್ ಬಾಲಕೃಷ್ಣ ಲೋಕಾಯುಕ್ತ ಬಲೆಗೆ

ಮಂಗಳೂರು: ವಂಚನೆ ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ಹಣದ ಬಿಡುಗಡೆಗಾಗಿ ಲಂಚಪಡೆದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಜಪೆ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಬಜಪೆ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣದಲ್ಲಿ ಹಣವನ್ನು ವಶಪಡಿಸಿಕೊಂಡಿದ್ದ ಪೊಲೀಸ್ ಇನ್ಸ್ಪೆಕ್ಟರ್ ಬಾಲಕೃಷ್ಣ, ಸಂತ್ರಸ್ತರಿಗೆ ಹಣವನ್ನು ವಾಪಸ್ ನೀಡಲು ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಸಂತ್ರಸ್ತರಿಂದ ₹15 ಸಾವಿರ ಮುಂಗಡವಾಗಿ ಪಡೆದುಕೊಂಡಿದ್ದ ಬಾಲಕೃಷ್ಣ, ಇನ್ನೂ ₹5 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅವರನ್ನು ಬಂಧಿಸಿದ್ದರು.
