Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮೈಸೂರು: ಇಂದಿನಿಂದ ನಾಡಹಬ್ಬ ದಸರಾ ಸಾಂಸ್ಕೃತಿಕ ಮುನ್ನುಡಿಯ ‘ಯುವ ಸಂಭ್ರಮ’ – ಕುಣಿದು ಕೇಕೆ ಹಾಕಲು ಸಜ್ಜಾದ ಯುವಪಡೆ!

Spread the love

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿಯೇ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಸದಾಶಿವನಗರದ ಖಾಲಿ ನಿವೇಶನವೊಂದರ ಬಳಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಯುವಕನೋರ್ವ ಪ್ರಶ್ನೆ ಮಾಡಿದ್ದಾನೆ. ಬಳಿಕ ಇಬ್ಬರ ನಡುವೆ ವಾಗ್ದಾದ ನಡೆದಿದ್ದು, ಯುವಕ ಮುನಿರತ್ನ ಅವರ ಕತ್ತಿನ ಪಟ್ಟಿ ಹಿಡಿದಿದ್ದಾನೆ ಎನ್ನಲಾಗಿದೆ.

ಮುನಿರತ್ನ ಅವರು ಅಸಭ್ಯ ಹಾಗೂ ಅವ್ಯಾಚ ಪದ ಬಳಸಿದ್ದಾರೆ. ತನ್ನ ತಾಯಿಯ ಬಗ್ಗೆ ಕೆಟ್ಟದ್ದಾಗಿ ಮಾತನಾಡಿದ್ದನ್ನು ಪ್ರಶ್ನಿಸಿರುವುದಾಗಿ ಯುವ ಹೇಳಿಕೊಂಡಿದ್ದಾನೆ.

ಸ್ಥಳದಲ್ಲಿದ್ದ ಸಾರ್ವಜನಿಕರು ಯುವಕ ಹಾಗೂ ಶಾಸಕರ ನಡುವಿನ ಜಟಾಪಟಿಯ ದೃಶ್ಯವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ. ಪರಿಸ್ಥಿತಿ ತೀವ್ರಗೊಳ್ಳುತ್ತಿದ್ದಂತೆಯೇ ಶಾಸಕರು ಕೂಲ್ ಆದಂತೆ ಕಂಡುಬಂದಿದೆ. ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಪುಲ್ ವೈರಲ್ ಆಗುತ್ತಿದ್ದು, ಸಾರ್ವಜನಿಕರು ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *