Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಾರ್ಕಳ: ಸ್ನೇಹಿತರೊಂದಿಗೆ ಸುವರ್ಣ ನದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಸಾ*ವು!

Spread the love

ಕಾರ್ಕಳ : ಸ್ನೇಹಿತರೊಂದಿಗೆ ಸುವರ್ಣ ನದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಹಿರ್ಗಾನ ಗ್ರಾಮದ ನಿವಾಸಿಗಳಾದ ಭರತ್ ಪೂಜಾರಿ (29) ಹಾಗೂ ಹರ್ಷನ್ ಆಚಾರ್ಯ (23) ಎಂದು ಗುರುತಿಸಲಾಗಿದೆ. ಭರತ್ ಪೂಜಾರಿ ವೃತ್ತಿಯಲ್ಲಿ ಪೇಂಟಿಂಗ್ ಕೆಲಸ ಮಾಡುತ್ತಿದ್ದರು.

ಮಂಗಳವಾರ ಕೆಲಸಕ್ಕೆ ರಜೆ ಇದ್ದಿದ್ದರಿಂದ ಭರತ್ ಹಾಗೂ ಹರ್ಷನ್ ಸೇರಿದಂತೆ ಐವರು ಸ್ನೇಹಿತರು ಈಜಲೆಂದು ಹೆರ್ಮುಂಡೆಯ ಸುವರ್ಣ ನದಿಗೆ ತೆರಳಿದ್ದರು. ಹಿರ್ಗಾನದ ಮಂಗಿಲಾರು ಎಂಬಲ್ಲಿನ ಸುಮಾರು 2 ಕಿಲೋಮೀಟರ್‌ಗಳಷ್ಟು ದುರ್ಗಮ ದಾರಿಯಲ್ಲಿ ನಡೆದುಕೊಂಡು ತೆರಳಿದ ಇವರು ನದಿಯಲ್ಲಿ ಈಜಲು ಇಳಿದಿದ್ದರು. ಈ ವೇಳೆ ಸರಿಯಾಗಿ ಈಜು ಬಾರದ ಭರತ್ ಹಾಗೂ ಹರ್ಷನ್ ನದಿಯ ಆಳವಾದ ಭಾಗದಲ್ಲಿ ಮುಳುಗಿ ನೀರುಪಾಲಾಗಿದ್ದಾರೆ. ಜೊತೆಯಲ್ಲಿದ್ದ ಸ್ನೇಹಿತರು ತಕ್ಷಣವೇ ಸ್ಥಳೀಯರಿಗೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರರ ಸಹಕಾರದೊಂದಿಗೆ ನಿರಂತರ ಮೂರು ಗಂಟೆಗಳ ಕಾಲ ಶೋಧ ಕಾರ್ಯಾಚರಣೆ ನಡೆಸಿ, ಕೊನೆಗೂ ಇಬ್ಬರ ಮೃತದೇಹಗಳನ್ನು ನದಿಯಿಂದ ಮೇಲಕ್ಕೆ ಎತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *