Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಗಳೂರು: 1.60 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಯುವಕನ ಬಂಧನ – ಕಾವೂರು ಪೊಲೀಸರಿಂದ ಕಾರ್ಯಾಚರಣೆ!

Spread the love

ಮಂಗಳೂರು: ಎಂಡಿಎಂಎ ಮಾದಕ ವಸ್ತು ಹೊಂದಿದ ಆರೋಪದಲ್ಲಿ ಯುವಕನೋರ್ವನನ್ನು ಕಾವೂರು ಠಾಣಾ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಕೋಟೆಕಾ‌ರ್ ಅಜ್ಜಿನಡ್ಕ ನಿವಾಸಿ ಮುಹಮ್ಮದ್ ಇರ್ಫಾನ್ ಎ.ಕೆ. (26) ಬಂಧಿತ ಆರೋಪಿ. ಆತನಿಂದ 16 ಗ್ರಾಂ ತೂಕದ 1.60 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೆ.29ರಂದು ಮರಕಡ ಗ್ರಾಮದ ಬೊಂದೇಲ್ ನಿಂದ ಮೂಡುಶೆಡ್ಡೆ ಕಡೆಗೆ ಹೋಗುವ ರಸ್ತೆಯ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಆರೋಪಿ ಇರ್ಫಾನ್ ವಿಚಾರಿಸಿದಾಗ ಮಾದಕ ವಸ್ತು ಹೊಂದಿರುವುದು ಪತ್ತೆಯಾಗಿದೆ. ಆತನ ವಿರುದ್ದ ಅ.ಕ್ರ.128/2026 ಎನ್.ಡಿ.ಪಿ.ಎಸ್. ಕಾಯ್ದೆಯಡಿಯಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ವಿರುದ್ಧ ಈಗಾಗಲೇ ಉಳ್ಳಾಲ ಠಾಣೆಯಲ್ಲಿ ಕಳ್ಳತನ, ಗಾಂಜಾ ಸೇವನೆ ಮತ್ತು ಪುಂಜಾಲಕಟ್ಟೆ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಪ್ರಕಟನೆ ತಿಳಿಸಿದೆ.


Spread the love
Share:

administrator

Leave a Reply

Your email address will not be published. Required fields are marked *