Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಎಲ್ಲಾ ಶನಿವಾರ ಬ್ಯಾಂಕ್‌ಗಳಿಗೆ ರಜೆ ವಾರ್ತೆ ನಕಲಿ: ಪಿಐಬಿ ಸ್ಪಷ್ಟನೆ!

Spread the love

ಹೊಸದಿಲ್ಲಿ: ಕೇಂದ್ರ ಸರಕಾರವು ಎಸ್‌ಬಿಐ ಸೇರಿದಂತೆ ಎಲ್ಲ ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ ಪ್ರತಿ ಶನಿವಾರವನ್ನು ಸಾರ್ವಜನಿಕ ರಜೆಯನ್ನಾಗಿ ಘೋಷಿಸಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಅಧಿಸೂಚನೆ ಸುಳ್ಳು ಎಂದು ಪ್ರೆಸ್ ಇನ್ಸಾರ್ಮೇಷನ್ ಬ್ಯೂರೊದ (ಪಿಐಬಿ) ಫ್ಯಾಕ್ಸ್ ಚೆಕ್ ವಿಭಾಗವು ಗುರುವಾರ ಸ್ಪಷ್ಟಪಡಿಸಿದೆ.
ಎಕ್ಸ್‌ನಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ ಪಿಐಬಿ ಫ್ಯಾಕ್ಸ್ ಚೆಕ್, ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆಗೆ ಸೇರಿದ್ದು ಎನ್ನಲಾದ ಈ ಗೆಜೆಟ್ ಪ್ರತಿಯು ಸಂಪೂರ್ಣವಾಗಿ ನಕಲಿಯಾಗಿದೆ ಹಾಗೂ ಹಣಕಾಸು ಸಚಿವಾಲಯವು ಇಂತಹ ಯಾವುದೇ ಅಧಿಸೂಚನೆಯನ್ನು ಹೊರಡಿಸಿಲ್ಲ ಎಂದು ತಿಳಿಸಿದೆ.
ಕೇಂದ್ರ ಸರಕಾರಕ್ಕೆ ಸಂಬಂಧಿಸಿದ ಯಾವುದೇ ಸಂದೇಹಾಸ್ಪದ ವಿಷಯಗಳು ಕಂಡುಬಂದಲ್ಲಿ ಅವುಗಳನ್ನು ಪಿಐಬಿ ಫ್ಯಾಕ್ಟ್ ಚೆಕ್ ಗಮನಕ್ಕೆ ತರುವಂತೆ ಅದು ಸಾರ್ವಜನಿಕರನ್ನು ಆಗ್ರಹಿಸಿದೆ.


Spread the love
Share:

administrator

Leave a Reply

Your email address will not be published. Required fields are marked *