ಮಂಗಳೂರು: ಏಷ್ಯನ್ ಗೇಮ್ಸ್ ಗೋಲ್ಡ್ ಮೆಡಲಿಸ್ಟ್ ಎಂ.ಆರ್. ಪೂವಮ್ಮಗೆ ಅದ್ಧೂರಿ ಸ್ವಾಗತ, ಸರ್ಕಾರದ ವಿರುದ್ಧ ಅಸಮಾಧಾನ!

ಮಂಗಳೂರು: ಏಷ್ಯನ್ ಗೇಮ್ಸ್ (Asian Games 2026) ರಿಲೇಯಲ್ಲಿ ಚಿನ್ನದ ಪದಕ ಗೆದ್ದಿರುವ ಕರ್ನಾಟಕದ ಕ್ರೀಡಾಪಟು ಎಂ.ಆರ್. ಪೂವಮ್ಮ (M R Poovamma) ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೂವಮ್ಮ ಅವರಿಗೆ ಅಭಿಮಾನಿಗಳು ಹಾಗೂ ಕ್ರೀಡಾಭಿಮಾನಿಗಳಿಂದ ಅದ್ಧೂರಿ ಸ್ವಾಗತ ದೊರೆಯಿತು.ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಎಂ.ಆರ್. ಪೂವಮ್ಮ, ದೇಶಕ್ಕೆ ಮೆಡಲ್ ತಂದುಕೊಟ್ಟಿರುವುದು ನನಗೆ ತುಂಬಾ ಖುಷಿ ನೀಡಿದೆ. ಆದರೆ, ರಾಜ್ಯ ಸರ್ಕಾರದಿಂದ ನಿರೀಕ್ಷಿತ ಪ್ರೋತ್ಸಾಹ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಸರ್ಕಾರದಿಂದ ಕ್ರೀಡಾಪಟುಗಳಿಗೆ ಸೂಕ್ತ ಬೆಂಬಲ ಸಿಗುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಮೇಲೆ ಅಸಮಾಧಾನ
ಮೆಡಲ್ ಗೆದ್ದ ತಮ್ಮ ತಂಡದ ಎಲ್ಲರಿಗೂ ರಾಜ್ಯದ ಮುಖ್ಯಮಂತ್ರಿ ಕರೆ ಮಾಡಿ ಶುಭ ಹಾರೈಸಿದ್ದಾರೆ. ಆದರೆ, ತಮಗೆ ಮಾತ್ರ ನಿನ್ನೆ ಎಲ್ಲಾ ಕಡೆ ಸುದ್ದಿಯಾದ ಬಳಿಕ ಡಿಸಿಎಂ ಪರಮೇಶ್ವರ್ ಕರೆ ಮಾಡಿದ್ದಾರೆ ಎಂದು ಪೂವಮ್ಮ ಹೇಳಿದ್ದಾರೆ.
ದೇಶಕ್ಕೆ ಮೆಡಲ್ ತಂದುಕೊಟ್ಟಿರುವುದು ನನಗೆ ತುಂಬಾ ಖುಷಿ ನೀಡಿದೆ. ಆದರೆ, ನಮ್ಮ ರಾಜ್ಯ ಸರ್ಕಾರದಿಂದ ನಮಗೆ ಯಾವುದೇ ಪ್ರೋತ್ಸಾಹ ಸಿಕ್ಕಿಲ್ಲ ಎಂದು ಅವರು ಹೇಳಿದ್ದಾರೆ.