ಮಂಗಳೂರು: ದಸರಾ ಹಬ್ಬದ ನಡುವೆಯೇ ಸೆಮಿಸ್ಟರ್ ಪರೀಕ್ಷೆ; ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿಗಳಿಂದ ತೀವ್ರ ಪ್ರತಿಭಟನೆ!

ಮಂಗಳೂರು: ದಸರಾ(Dasara) ಸಂಭ್ರಮದ ನಡುವೆಯೇ ಕಾಲೇಜು ಆಡಳಿತ ಮಂಡಳಿಯು ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು (Semester Exam) ನಿಗದಿಪಡಿಸಿರುವುದನ್ನು ವಿರೋಧಿಸಿ, ನಗರದ ಖ್ಯಾತ ಸೈಂಟ್ ಆಗ್ನೆಸ್ (St. Agnes College) ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಕಾಲೇಜು ಗೇಟ್ ಎದುರು ಬೃಹತ್ ಪ್ರತಿಭಟನೆ(Protest) ನಡೆಸಿದ್ದಾರೆ.ಮಂಗಳೂರಿನ(Mangaluru) ಬೆಂದೂರ್‌ವೆಲ್ ಬಳಿಯಿರುವ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಇಂದಿನಿಂದ ಅಕ್ಟೋಬರ್ 28ರವರೆಗೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಲಾಗಿದೆ.

ಮಂಗಳೂರು ದಸರಾ ಕರಾವಳಿಯ ಪ್ರಮುಖ ಹಬ್ಬವಾಗಿದ್ದು, ಎಲ್ಲೆಡೆ ಸಂಭ್ರಮ ಮನೆಮಾಡಿದೆ. ಆದರೆ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ದಸರಾ ರಜೆಯನ್ನೇ ನೀಡದೆ ಪರೀಕ್ಷೆ ನಡೆಸಲು ಮುಂದಾಗಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.