Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೊಡಗು: ತೋಟದಲ್ಲಿ ಕೆಲಸ ಮಾಡುತ್ತಿದ್ದ ಶಂಕಿತ ಅಕ್ರಮ ವಲಸಿಗರ ಪತ್ತೆ – ಪೊಲೀಸರ ವಶಕ್ಕೆ!

Spread the love

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಕ್ರಮ ವಲಸಿಗರ ಕುರಿತ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ಬಾಳೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಟ್ಟಿಗೇರಿಯಲ್ಲಿ ತೋಟದ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ನಾಲ್ವರನ್ನು ಹಿಂದೂ ಜಾಗರಣ ವೇದಿಕೆ ಹಾಗೂ ಆಟೋ ಚಾಲಕರ ಸಂಘದ ಸದಸ್ಯರು ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಪತ್ತೆಯಾದ ನಾಲ್ವರಲ್ಲಿ ಗಂಡ-ಹೆಂಡತಿ ಹಾಗೂ ಇಬ್ಬರು ಮಕ್ಕಳು ಸೇರಿದ್ದಾರೆ ಎನ್ನಲಾಗಿದೆ. ಪಶ್ಚಿಮ ಬಂಗಾಳದ ಬ್ರೋಕರ್ ಮೂಲಕ ಭಾರತಕ್ಕೆ ಬಂದಿರುವುದಾಗಿ ಅವರು ಹೇಳಿಕೊಂಡಿದ್ದಾರೆ ಎಂದು ಸಂಘಟನೆಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ನಾಲ್ವರ ಹಿನ್ನೆಲೆ, ಗುರುತಿನ ಚೀಟಿಗಳು ಹಾಗೂ ಇತರ ದಾಖಲೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂಬ ಆಗ್ರಹ ಕೇಳಿಬಂದಿದೆ.

ಕೊಡಗು ಜಿಲ್ಲೆಯಲ್ಲಿ ಅಕ್ರಮ ವಲಸಿಗರ ಪತ್ತೆಯ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ಬಾಳೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಟ್ಟಿಗೇರಿಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ತೋಟವೊಂದರಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ನಾಲ್ವರನ್ನು ಹಿಂದೂ ಜಾಗರಣ ವೇದಿಕೆ ಹಾಗೂ ಆಟೋ ಚಾಲಕರ ಸಂಘದ ಸದಸ್ಯರು ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ಪತ್ತೆಯಾದ ನಾಲ್ವರಲ್ಲಿ ಗಂಡ-ಹೆಂಡತಿ ಹಾಗೂ ಇಬ್ಬರು ಮಕ್ಕಳು ಸೇರಿದ್ದಾರೆ ಎನ್ನಲಾಗಿದೆ. ಪಶ್ಚಿಮ ಬಂಗಾಳದ ಬ್ರೋಕರ್ ಮೂಲಕ ಭಾರತಕ್ಕೆ ಬಂದಿರುವುದಾಗಿ ಅವರು ಹೇಳಿಕೊಂಡಿದ್ದಾರೆ ಎಂದು ಸಂಘಟನೆಗಳು ತಿಳಿಸಿವೆ.


Spread the love
Share:

administrator

Leave a Reply

Your email address will not be published. Required fields are marked *