Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕನ್ನಡಿಗರ ಆಕ್ರೋಶಕ್ಕೆ ಮಣಿದ ಸೋನು ನಿಗಮ್: ನಾರಾಯಣಗೌಡರ ಬಳಿ ಕ್ಷಮೆಯಾಚನೆ!

Spread the love

ಬೆಂಗಳೂರು: ಖ್ಯಾತ ಗಾಯಕ ಸೋನು ನಿಗಮ್‌(Sonu Nigam) ಕನ್ನಡಿಗರಲ್ಲಿ ಕ್ಷಮೆ ಕೇಳಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ(TA Narayana Gowda) ಅವರಲ್ಲಿ ಮಾತನಾಡಿದ ಅವರು ಕ್ಷಮೆ ಕೋರಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿ ಈ ವಿಚಾರ ತಿಳಿಸಿದ ನಾರಾಯಣಗೌಡ ಅವರು, ಗಾಯಕ ಸೋನು ನಿಗಮ್ ಇಂದು ನನ್ನೊಂದಿಗೆ ಮಾತಾಡಿದರು. ತಾವು ಹಿಂದೆ ಮಾಡಿದ ಒಂದು ಮಾತು ಕನ್ನಡಿಗರನ್ನು ಹೇಗೆ ನೋಯಿಸಿದೆ ಎಂಬುದು ಅವರಿಗೆ ಅರ್ಥವಾಗಿದೆ. ಬೇಷರತ್ತಾಗಿ ಕ್ಷಮೆ ಯಾಚಿಸುವುದಾಗಿ ಅವರು ಹೇಳಿದರು. ನೋಯಿಸಿದೆ ಎಂಬುದು ಅವರಿಗೆ ಅರ್ಥವಾಗಿದೆ. ಬೇಷರತ್ತಾಗಿ ಕ್ಷಮೆ ಯಾಚಿಸುವುದಾಗಿ ಅವರು ಹೇಳಿದರು ಎಂದು ಬರೆದಿದ್ದಾರೆ.

ನಾರಾಯಣಗೌಡ ಪೋಸ್ಟ್‌ನಲ್ಲಿ ಏನಿತ್ತು?
ನಾನು ಹಿಂದೆಯೂ ಹೇಳಿದ್ದೇನೆ. ನಾವೆಲ್ಲರೂ ಸೋನು ನಿಗಮ್ ಅವರ ಹಾಡುಗಳನ್ನು ಇಷ್ಟಪಟ್ಟವರು. ಅವರ ಕುರಿತು ವೈಯಕ್ತಿಕವಾಗಿ ಯಾವ ದ್ವೇಷ, ಮುನಿಸು ನಮಗೆ ಇರಲಿಲ್ಲ. ಆ ಒಂದು ಮಾತನ್ನು ಅರಗಿಸಿಕೊಳ್ಳಲು ನಮ್ಮಿಂದ ಆಗಿರಲಿಲ್ಲ. ಅದಕ್ಕಾಗಿ ನಮ್ಮ ಪ್ರತಿಭಟನೆ, ಆಕ್ರೋಶ ಸಹಜವಾಗೆ ಇತ್ತು.

ಇದೀಗ ಅವರು ಕ್ಷಮೆ ಯಾಚಿಸಿದ್ದಾರೆ. ಇಲ್ಲಿಗೆ ಇದನ್ನು ಮುಗಿಸುವುದು ಒಳ್ಳೆಯದು. ಕ್ಷಮೆ ಕೇಳಿದವರನ್ನು ಕ್ಷಮಿಸುವುದು ಕನ್ನಡಿಗರ ಔದಾರ್ಯ, ಸಂಸ್ಕಾರ.

ಘಂಟಸಾಲ, ಪಿ ಬಿ. ಶ್ರೀನಿವಾಸ್, ಯೇಸುದಾಸ್, ಎಸ್. ಜಾನಕಿ, ವಾಣಿ ಜಯರಾಮ್, ಚಿತ್ರಾ ಹೀಗೆ ಅದ್ಭುತ ಗಾಯಕರು ಕನ್ನಡಿಗರಲ್ಲದೆ ಇದ್ದರೂ ನಾವು ಅವರನ್ನು ಅಪಾರವಾಗಿ ಪ್ರೀತಿಸಿದ್ದೇವೆ. ಅವರು ನಮ್ಮ ಕನ್ನಡ ಚಿತ್ರಸಂಗೀತವನ್ನು ಶ್ರೀಮಂತಗೊಳಿಸಿದ ಮಹಾನುಭಾವರು. ಆ ಕೃತಜ್ಞತೆ ಸದಾ ಇರುತ್ತದೆ.

ಸೋನು ನಿಗಮ್ ಕೂಡ ಇದೇ ಸಾಲಿನಲ್ಲಿ ಬರುವ ಮಹಾ ಗಾಯಕರಲ್ಲಿ ಒಬ್ಬರು. ಈ ಕಹಿಘಟನೆಯನ್ನು ಮರೆತುಬಿಡೋಣ. ಕರ್ನಾಟಕ ರಕ್ಷಣಾ ವೇದಿಕೆ ಈ ಹೋರಾಟವನ್ನು ಇಲ್ಲಿಗೆ ನಿಲ್ಲಿಸುತ್ತದೆ. ಇದು ಎಲ್ಲರಿಗೂ ಒಂದು ಪಾಠ.

ನಾನು ವೈಯಕ್ತಿಕವಾಗಿ ಸಂಗೀತ ಪ್ರೇಮಿ. ಸಂಗೀತ ಮನುಷ್ಯನ ಎಲ್ಲಾ ಸಂಕಟಗಳನ್ನು ಮರೆಸುವ ಸಂಜೀವಿನಿ. ಸೋನು ಅವರು ಇನ್ನಷ್ಟು ಕನ್ನಡ ಗೀತೆಗಳನ್ನು ಹಾಡಲಿ, ಕರ್ನಾಟಕದ ನೆಲದಲ್ಲಿ ಅವರ ಕಾರ್ಯಕ್ರಮಗಳು ನಡೆಯಲಿ. ಸಂಗೀತ ನಮ್ಮ ಬದುಕನ್ನು ಇನ್ನಷ್ಟು ಸಹನೀಯ ಗೊಳಿಸಲಿ, ಪ್ರೀತಿ ಗೆಲ್ಲಲಿ.

ವಿವಾದ ಯಾಕಾಯ್ತು?
2025ರ ಏಪ್ರಿಲ್‌ನಲ್ಲಿ ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಅಭಿಮಾನಿಯೊಬ್ಬರು ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದ್ದರು. ಇದರಿಂದ ಸಿಟ್ಟಿಗೆದ್ದ ಸೋನು ನಿಗಮ್, “ಕನ್ನಡ, ಕನ್ನಡ.. ಇದೇ ಕಾರಣದಿಂದ ಪಹಲ್ಗಾಮ್‌ನಲ್ಲಿ ದಾಳಿಯಾಗಿದ್ದು” ಎಂದು ಹೇಳಿ ಕನ್ನಡ ಹಾಡಿನ ಬೇಡಿಕೆಯನ್ನು ಭಯೋತ್ಪಾದನಾ ಕೃತ್ಯಕ್ಕೆ ಹೋಲಿಸಿದ್ದರು.

ಈ ಹೇಳಿಕೆಯು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡಪರ ಸಂಘಟನೆಗಳು ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದವು. ಪೊಲೀಸರು ಅವರು ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಈಗ ಈ ವಿಚಾರ ಸುದ್ದಿಯಲ್ಲಿ ಯಾಕಿದೆ?
ಅಕ್ಟೋಬರ್ 24 ರಂದು ಬೆಂಗಳೂರಿನ ಭಾರತೀಯ ಮಾಲ್‌ನಲ್ಲಿ ಸೋನು ನಿಗಮ್ ಅವರ ಸಂಗೀತ ಕಾರ್ಯಕ್ರಮ (‘ದಿ ರೆವಲ್ಯೂಷನ್ ಇಂಡಿಯಾ ಟೂರ್’) ಆಯೋಜನೆಯಾಗಿದೆ. ಈ ಕಾರ್ಯಕ್ರಮಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ.”ಕನ್ನಡಿಗರ ಭಾಷಾಭಿಮಾನವನ್ನು ಭಯೋತ್ಪಾದನೆಗೆ ಹೋಲಿಸಿದವರ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು ಎಂದು ಕರವೇ ಪೊಲೀಸ್ ಕಮಿಷನರ್‌ಗೆ ಮನವಿ ಮಾಡಿದ್ದು, ರಾಜ್ಯವ್ಯಾಪಿ ಪ್ರತಿಭಟನೆಯ ಎಚ್ಚರಿಕೆ ನೀಡಿತ್ತು.


Spread the love
Share:

administrator

Leave a Reply

Your email address will not be published. Required fields are marked *