ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ: ಶಸ್ತ್ರಾಸ್ತ್ರ ಪೂರೈಕೆ ಆರೋಪದಲ್ಲಿ ಇಬ್ಬರ ಬಂಧನ!

ಬಾಲಿವುಡ್ ನಟ ಟೈಗರ್ ಶ್ರಾಫ್ ( Attack On Tiger Shroff) ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು (Mumbai Police) ಬಂಧಿಸಿದ್ದಾರೆ.
ಹರಿಯಾಣದ ಸೋನಿಪತ್ನಲ್ಲಿ ಸಮೀರ್ ಮತ್ತು ಜತಿನ್ ಎಂಬ ಆರೋಪಿಗಳನ್ನು ಮುಂಬೈ ಪೊಲೀಸರ ಅಪರಾಧ ವಿಭಾಗ ಬಂಧಿಸಿದೆ. ಪ್ರಕರಣದಲ್ಲಿ ಶಸ್ತ್ರಾಸ್ತ್ರಗಳನ್ನು ಪೂರೈಸಿದ ಆರೋಪ ಇವರ ಮೇಲಿದೆ. ಈ ಇಬ್ಬರ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಗುಂಡಿನ ದಾಳಿ ಪ್ರಕರಣದಲ್ಲಿ ಬಳಸಲಾಗಿದೆ ಎನ್ನಲಾದ ಶಸ್ತ್ರಾಸ್ತ್ರಗಳ ಪೂರೈಕೆಯಲ್ಲಿ ಸಮೀರ್ ಮತ್ತು ಜತಿನ್ ಪ್ರಮುಖ ಪಾತ್ರ ವಹಿಸಿದ್ದಾರೆ. ಸದ್ಯ ಇಬ್ಬರ ಬಂಧನಕ್ಕೆ ಸಂಬಂಧಿಸಿದ ಕಾನೂನು ಪ್ರಕ್ರಿಯೆ ನಡೆಯುತ್ತಿದೆ. ಆರೋಪಿಗಳನ್ನು ಸೋನಿಪತ್ ನ್ಯಾಯಾಲಯಕ್ಕೆ ಹಾಜರುಪಡಿಸಿ ಟ್ರಾನ್ಸಿಟ್ ರಿಮಾಂಡ್ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆಗಾಗಿ ಅವರನ್ನು ಮುಂಬೈಗೆ ಕರೆತರಲಾಗುತ್ತದೆ.
ಗುಂಡಿನ ದಾಳಿಯ ಹಿಂದೆ ಯಾರಿದ್ದಾರೆ? ಶಸ್ತ್ರಾಸ್ತ್ರಗಳನ್ನು ಎಲ್ಲಿಂದ ತರಲಾಗಿತ್ತು? ಈ ಕೃತ್ಯಕ್ಕೆ ಕಾರಣವೇನು? ಎಂಬುದರ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
