Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಎಐ ಬಳಸಿ ವಿಧಾನಸೌಧ ಸ್ಫೋಟದ ನಕಲಿ ವಿಡಿಯೋ ಹರಿಬಿಟ್ಟಿದ್ದ ಯುವಕ ಅರೆಸ್ಟ್!

Spread the love

ಬೆಂಗಳೂರು: ಕರ್ನಾಟಕದ ಶಕ್ತಿ ಸೌಧವಾದ ವಿಧಾನಸೌಧವನ್ನು(Vidhana Soudha) ಬಾಂಬ್ ಇಟ್ಟು ಸ್ಫೋಟಿಸಿದಂತೆ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ನಕಲಿ ವಿಡಿಯೋ ತಯಾರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಕಿಡಿಗೇಡಿಯನ್ನು ವಿಧಾನಸೌಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಿಹಾರ(Bihar) ಮೂಲದ ಹಜರತ್ ಅಲಿ ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಪೈಪ್ ಮಾರಾಟ ಮಳಿಗೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ.

ಆರೋಪಿ ಹಜರತ್ ಅಲಿ ತನ್ನ ‘Jnx king Hg’ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ಎಐ ನಿರ್ಮಿತ ವಿಡಿಯೋವನ್ನು ಹಂಚಿಕೊಂಡಿದ್ದನು. ಅದಕ್ಕೆ “ವಿಧಾನಸೌಧ ಉಡಾ ದಿಯಾ ಬಾಂಬ್” (ವಿಧಾನಸೌಧವನ್ನು ಬಾಂಬ್‌ನಿಂದ ಉಡಾಯಿಸಲಾಯಿತು) ಎಂಬ ಆತಂಕಕಾರಿ ಶೀರ್ಷಿಕೆಯನ್ನು ನೀಡಿದ್ದನು. ಎಐ ಮೂಲಕ ಸೃಷ್ಟಿಸಲಾದ ಈ ವಿಡಿಯೋದಲ್ಲಿ ವಿಧಾನಸೌಧ ಧ್ವಂಸಗೊಂಡಂತೆ ದೃಶ್ಯಗಳನ್ನು ಸೃಷ್ಟಿಸಲಾಗಿದ್ದು, ಇದು ಸಾರ್ವಜನಿಕರಲ್ಲಿ ತೀವ್ರ ಭೀತಿ ಮತ್ತು ಗೊಂದಲವನ್ನುಂಟು ಮಾಡಿತ್ತು.ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ವಿಧಾನಸೌಧ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಸೈಬರ್ ಕ್ರೈಂ ವಿಭಾಗದ ನೆರವಿನೊಂದಿಗೆ ಆರೋಪಿಯ ಸಾಮಾಜಿಕ ಜಾಲತಾಣದ ಖಾತೆಯನ್ನು ಪರಿಶೀಲಿಸಿ, ಆತನ ಮೊಬೈಲ್ ಲೊಕೇಶನ್ ಆಧರಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದು ಕಂಬಿ ಎಣಿಸುವಂತೆ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಡಿಪ್‌ಫೇಕ್ ಹಾಗೂ ಎಐ ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಂಡು ಸುಳ್ಳು ಸುದ್ದಿ ಹರಡುವುದು ಮತ್ತು ಸಾರ್ವಜನಿಕ ಶಾಂತಿ ಕದಡುವ ಕೃತ್ಯಗಳು ಹೆಚ್ಚುತ್ತಿವೆ. ಇಂತಹ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ.


Spread the love
Share:

administrator

Leave a Reply

Your email address will not be published. Required fields are marked *