Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರೀಲ್ಸ್‌ ಹುಚ್ಚಿಗೆ ಮಗುವಿನ ಜೀವದ ಜೊತೆ ಚೆಲ್ಲಾಟ: ಪೋಷಕರ ವಿರುದ್ಧ ನೆಟ್ಟಿಗರ ಆಕ್ರೋಶ!

Spread the love

ಬೆಳಗಾವಿ: ಮನೆಯಲ್ಲಿ ವಿಜಯದಶಮಿ ಹಬ್ಬದ ಸಂಭ್ರಮದ ರಾತ್ರಿಯಂದು ರಕ್ತದ ಕೋಡಿಯೇ ಹರಿದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ (Belagavi) ನಗರದ ಮುರಳೀಧರ್ ಕಾಲೋನಿಯಲ್ಲಿ ನಡೆದಿದೆ.

ಅಶ್ವಿನಿ ವಿಠ್ಠಲ ಹೆಗಡೆ (23) ಕೊಲೆಯಾದ ದುರ್ದೈವಿ. ಪತಿ ವಿಠ್ಠಲ ರುದ್ರಪ್ಪ ಹೆಗಡೆ (33) ಕೊಲೆ ಮಾಡಿದ ಆರೋಪಿಯಾಗಿದ್ದು, ಪರಾರಿಯಾಗಿದ್ದ ಆತನನ್ನು ಎಪಿಎಂಸಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಠ್ಠಲ ಪೇಂಟಿಂಗ್ ಕೆಲಸ ಮಾಡುತ್ತಿದ್ದ. ಆದರೆ, ವಿಪರೀತ ಮದ್ಯವ್ಯಸನಿಯಾಗಿದ್ದ. ಪ್ರತಿದಿನ ಕುಡಿದು ಬಂದು ಪತ್ನಿ ಅಶ್ವಿನಿಗೆ ಕಿರುಕುಳ ನೀಡುತ್ತಿದ್ದ. ಇದೇ ವಿಚಾರವಾಗಿ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು.

ಇನ್ನು ಅಶ್ವಿನಿಗೆ ಪರಿಚಿತ ವ್ಯಕ್ತಿಯೊಬ್ಬನ ಜೊತೆ ಸಲುಗೆ ಇತ್ತು, ಇದೇ ವಿಚಾರವೂ ದಂಪತಿ ನಡುವಿನ ಕಲಹಕ್ಕೆ ಕಾರಣವಾಗಿತ್ತು. ಕುಟುಂಬದಲ್ಲಿ ಜಗಳವಾದಾಗ ಪೋಷಕರು ಇಬ್ಬರಿಗೂ ಬುದ್ಧಿ ಹೇಳಿ ಸಮಾಧಾನ ಮಾಡುತ್ತಿದ್ದರು.

ಘಟನೆ ನಡೆದ ದಿನವೂ ಮನೆಯಲ್ಲಿ ಹಬ್ಬದ ವಾತಾವರಣವಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ವಿಠ್ಠಲನ ತಂದೆ ರುದ್ರಪ್ಪ ಅವರಿಗೆ ಅಶ್ವಿನಿ ಊಟ ಮಾಡಿಸುತ್ತಿದ್ದ ವೇಳೆ ವಿಠ್ಠಲ ಆಕೆಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಹಬ್ಬದ ಸಂಭ್ರಮದಲ್ಲಿದ್ದ ಮನೆಯಲ್ಲಿ ದುಃಖ ಮಡುಗಟ್ಟಿದೆದಂಪತಿಗೆ ಇಬ್ಬರು ಮಕ್ಕಳಿದ್ದು, ಅವರ ಭವಿಷ್ಯದ ಬಗ್ಗೆ ಕುಟುಂಬಸ್ಥರಲ್ಲಿ ಆತಂಕ ಮೂಡಿದೆ. ಹಬ್ಬದ ದಿನವೇ ಮಗಳು ಮೃತಪಟ್ಟಿದ್ದರಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಘಟನೆ ಬಳಿಕ ಪರಾರಿಯಾಗಿದ್ದ ವಿಠ್ಠಲ ಹೆಗಡೆಯನ್ನು ಎಪಿಎಂಸಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *